ಅತಂತ್ರ ಫಲಿತಾಂಶ ಬಂದರೆ ರಾಷ್ಟ್ರೀಯ ಪಕ್ಷಗಳು ನಮ್ಮ ಮನೆ ಬಾಗಿಲಿಗೆ ಬರಬೇಕಾಗುತ್ತೆ : ಹೆಚ್ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01-Rahul-Modi

ಚಿಕ್ಕಮಗಳೂರು, ಮೇ 6-ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸರಳ ಬಹುಮತ ದೊರೆಯದೆ ಅತಂತ್ರ ಫಲಿತಾಂಶ ಬಂದರೆ ರಾಷ್ಟ್ರೀಯ ಪಕ್ಷಗಳು ನಮ್ಮ ಮನೆ ಬಾಗಿಲಿಗೆ ಬರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.  ಚುನಾವಣಾ ಪೂರ್ವ ಸಮೀಕ್ಷೆಗಳು ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ ಎಂಬುದನ್ನು ಹೇಳುತ್ತಿವೆ.

ಆದರೆ ಜೆಡಿಎಸ್ 113 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು. ಸಮೀಕ್ಷೆಗಳ ಪ್ರಕಾರ ಜೆಡಿಎಸ್‍ಗೆ 40 ಸ್ಥಾನಗಳನ್ನು ನೀಡಲಾಗಿದೆ. ಅಷ್ಟೇ ಸ್ಥಾನಗಳು ಬಂದರು ರಾಷ್ಟ್ರೀಯ ಪಕ್ಷಗಳು ಅಧಿಕಾರ ರಚನೆ ಮಾಡಲು ಸಾಧ್ಯವಾಗುವುದಿಲ್ಲ. ಜೆಡಿಎಸ್ ಬೆಂಬಲವನ್ನು ಅಪೇಕ್ಷಿಸಬೇಕಾಗುತ್ತದೆ. ಚುನಾವಣಾ ಪೂರ್ವ ಸಮೀಕ್ಷೆಗಳಿಗೆ ವಾಸ್ತವತೆ ಆಧಾರವಿಲ್ಲ. ಈ ಬಾರಿ ಚುನಾವಣೆಯಲ್ಲಿ ನಾಡಿನ ಜನರು ಜೆಡಿಎಸ್ ಪರ ಒಲವು ತೋರುತ್ತಿದ್ದಾರೆ ಎಂದು ಹೇಳಿದರು.

Facebook Comments

Sri Raghav

Admin