ಮತ್ತೆ ಪಾಕ್’ನಿಂದ ಕಾಶ್ಮೀರದ ಪೂಂಚ್ ವಲಯದಲ್ಲಿ ಕದನವಿರಾಮ ಉಲ್ಲಂಘನೆ

ಈ ಸುದ್ದಿಯನ್ನು ಶೇರ್ ಮಾಡಿ

00

ಜಮ್ಮು, ಸೆ.6- ಚೀನಾದಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಬಗ್ಗೆ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಪಾಕಿಸ್ತಾನ ಮತ್ತೊಮ್ಮೆ ತನ್ನ ಕಿಡಿಗೇಡಿತನ ಪ್ರದರ್ಶಿಸಿದ್ದು, ಗಡಿ ನಿಯಂತ್ರಣ ರೇಖೆಯಲ್ಲಿ ಕದನವಿರಾಮ ಉಲ್ಲಂಘಿಸಿ, ಮೋರ್ಟಾರ್ ಷೆಲ್ ದಾಳಿ ನಡೆಸಿದೆ. ಭಾರತೀಯ ಯೋಧರು ಸೂಕ್ತ ಪ್ರತ್ಯುತ್ತರ ನೀಡಿದ್ದು, ಈ ಗುಂಡಿನ ಚಕಮಕಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.   ಒಂದು ವಾರದಲ್ಲಿ ಎರಡನೇ ಬಾರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿರುವ ಭಾರತ ಸೇನೆಯ ಮುಂಚೂಣಿ ನೆಲೆಗಳ ಮೇಲೆ ನಿನ್ನೆ ಮಧ್ಯರಾತ್ರಿಯಿಂದ ಪಾಕಿಸ್ತಾನಿ ಸೇನೆ ಗುಂಡಿನ ದಾಳಿ ಮತ್ತು ಷೆಲ್‍ಗಳನ್ನು ಸಿಡಿಸಿದೆ.

ಜಮ್ಮು-ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗೃಹ ಸಚಿವ ರಾಜ್‍ನಾಥ್ ಸಿಂಗ್ ನೇತೃತ್ವದ ನಿಯೋಗ ಮಾತುಕತೆಗೆ ತೆರಳುವ ಮುನ್ನ ಇದೇ ರೀತಿ ದಾಳಿ ನಡೆಸಲಾಗಿತ್ತು. ನಂತರ ಇದೀಗ ವೈಫಲ್ಯದ ನಂತರವೂ ಕದನ ವಿರಾಮ ಉಲ್ಲಂಘನೆಯಾಗಿದೆ.  ಪೂಂಚ್ ವಲಯದ ಎಲ್‍ಒಸಿಯಲ್ಲಿನ ಭಾರತೀಯ ಸೇನಾ ನೆಲೆಗಳ ಮೇಲೆ ಪಾಕಿಸ್ತಾನ ಸೇನಾಪಡೆಗಳು ಅಪ್ರಚೋದಿತವಾಗಿ ಯದ್ವಾತದ್ವಾ ಗುಂಡಿನ ದಾಳಿ ಮತ್ತು ತೋಪುಗಳನ್ನು ಉಡಾಯಿಸಿವೆ ಎಂದು ವಕ್ತಾರರು ತಿಳಿಸಿದ್ದಾರೆ.

ಶಹಪುರ್ ಕಂಡಿ ಪ್ರದೇಶದಲ್ಲಿ ಪಾಕ್ ಸೇನೆಯ ಅಪ್ರಚೋದಿತ ದಾಳಿಗೆ ಭಾರತೀಯ ಯೋಧರು ಸೂಕ್ತ ಪ್ರತ್ಯುತ್ತರ ನೀಡಿದ್ದಾರೆ. ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ಅಖ್ನೂರ್ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ನೆಲೆಗಳ ಮೇಲೆ ಸೆ.2ರಂದು ಗುಂಡಿನ ದಾಳಿ ನಡೆಸಿ ಪಾಕಿಸ್ತಾನವು ಕದನ ವಿರಾಮವನ್ನು ಉಲ್ಲಂಘಿಸಿತ್ತು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin