ಅತ್ಯಾಚಾರ ಆರೋಪಿ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

rape

ಚನ್ನಪಟ್ಟಣ, ನ.25- ಆಪ್ರಾಪ್ತೆಯ ಮೇಲೆ ಅತ್ಯಾಚಾರ ವೆಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರದೀಪ್ (35) ಬಂಧಿತ ಆರೋಪಿ.ತಾಲ್ಲೂಕಿನ ಸಂಕಲಗೆರೆ ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯನ್ನು ಪೆನ್ನು ತರಲು ಹೇಳಿ ಪೆನ್ನು ಪಡೆಯುವಾಗ ಆಕೆಯ ಮೇಲೆ ಹಲ್ಲೆ ನಡೆಸಿ ಪ್ರಜ್ಞೆ   ತಪ್ಪಿಸಿ ಅತ್ಯಾಚಾರವೆಸಗಿದ್ದನ್ನು.ಈ ಪ್ರಕರಣದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಚಂದ್ರಗುಪ್ತ ಪೊಲೀಸ್ ಉಪವಿಭಾಗಾಧಿಕಾರಿ ಆರ್.ಸಿ.ಲೋಕೇಶ್ ಗ್ರಾಮಾಂತರ ವೃತ್ತ ನಿರೀಕ್ಷಕ ಗೋಪಿನಾಥ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‍ಐ ಶಿವಕುಮಾರ್ ಹಾಗೂ ಚಾಲಕ ಶಿವಕುಮಾರ್ ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆ ಕಾರ್ಯಕ್ಕೆ ಬಲೆ ಬೀಸಿಮಂಡ್ಯದಲ್ಲಿದ್ದ ಆತನನ್ನು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.ಪೊಕ್ಸೊ ಕಾಯ್ದೆದಡಿ ಬಂಧಿತನಾಗಿರುವ ಆತನನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin