ಅಧಿಕಾರಿಗಳು ಕಾರುಗಳನ್ನು ಸರ್ಕಾರಿ ಉದ್ದೇಶಗಳಿಗೆ ಮಾತ್ರ ಬಳಸಬೇಕು

ಈ ಸುದ್ದಿಯನ್ನು ಶೇರ್ ಮಾಡಿ

Govt-Car--01

ದಾವಣಗೆರೆ, ಜು.25- ಸರ್ಕಾರಿ ಅಧಿಕಾರಿಗಳು ಗುತ್ತಿಗೆ ಆಧಾರದ ಮೇಲೆ ಪಡೆದಿರುವ ಕಾರುಗಳನ್ನು ತಮ್ಮ ಸರ್ಕಾರಿ ಸೇವೆಗೆ ಮಾತ್ರ ಬಳಸಿಕೊಳ್ಳಬೇಕು. ಅದನ್ನು ಬಿಟ್ಟು ತಮ್ಮ ಖಾಸಗಿ ಉದ್ದೇಶಗಳಿಗೆ ಬಳಸದಂತೆ ಜಿಲ್ಲಾಧಿಕಾರಿ ಪಿ.ಎಸ್.ರಮೇಶ್ ಖಡಕ್ ಸೂಚನೆ ನೀಡಿದ್ದಾರೆ. ಇಂದು ಬೆಳಗ್ಗೆ ಈ ಸಂಜೆಯೊಂದಿಗೆ ಮಾತನಾಡಿದ ಅವರು, ಜಿಪಂ, ತಾಪಂ, ಮಹಾನಗರ ಪಾಲಿಕೆ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲ ಸಂಸ್ಥೆಗಳಲ್ಲಿನ ಅಧಿಕಾರಿಗಳು ತಾವು ಬಳಸುವ ಕಾರುಗಳನ್ನು ಸರ್ಕಾರಿ ಉದ್ದೇಶಗಳಿಗೆ ಮಾತ್ರ ಬಳಸಬೇಕು ಎಂದರು.

ಜಿಲ್ಲಾಡಳಿತ ವ್ಯಾಪ್ತಿಯ ಸರ್ಕಾರಿ ಅಧಿಕಾರಿಗಳು ಗುತ್ತಿಗೆ ಆಧಾರದಲ್ಲಿ ಪೆಡದಿರುವ ವಾಹನಗಳನ್ನು ಸರ್ಕಾರಿ ಉದ್ದೇಶಗಳ ಜತೆಗೆ ಖಾಸಗಿ ಉದ್ದೇಶಗಳಿಗೂ ಬಳಸುತ್ತಿರುವ ಆರೋಪವು ಹಲವು ಮೂಲಗಳಿಂದ ಬಂದಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೆ, ಸರ್ಕಾರಿ ಕಾರುಗಳು ನಗರದ ವಿವಿಧ ಕಡೆ ಬಾರ್‍ಗಳ ಮುಂದೆಯೂ ಕೂಡ ನಿಂತಿರುವುದು ತಮ್ಮ ಗಮನಕ್ಕೆ ಬಂದಿದೆ. ಇನ್ನು ಮುಂದೆ ಯಾವುದೇ ಸರ್ಕಾರಿ ಅಧಿಕಾರಿಗಳು ಸರ್ಕಾರಿ ಸೇವೆ ಹೊರತುಪಡಿಸಿ ಖಾಸಗಿ ಉದ್ದೇಶಗಳಿಗೆ ಗುತ್ತಿಗೆ ಪಡೆದಿರುವ ಕಾರುಗಳನ್ನು ಬಳಸುವಂತಿಲ್ಲ. ಒಂದು ವೇಳೆ ಬಳಸಿದ್ದೇ ಆದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin