ಅಧಿಕೃತವಾಗಿ ಬಿಜೆಪಿ ಸೇರಿದ ನಿವೃತ್ತ ಐಎಎಸ್ ಅಧಿಕಾರಿ ಡಾ. ಸೋಮಶೇಖರ್

ಈ ಸುದ್ದಿಯನ್ನು ಶೇರ್ ಮಾಡಿ

Somashekhar

ಬೆಂಗಳೂರು, ಅ.6-ನಿವೃತ್ತ ಐಎಎಸ್ ಅಧಿಕಾರಿ ಹಾಗೂ ವೀರಶೈವ ಮುಖಂಡ ಡಾ.ಸೋಮಶೇಖರ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸೋಮಶೇಖರ್ ಅವರನ್ನು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್‍ಕುಮಾರ್, ಡಿ.ವಿ.ಸದಾನಂದಗೌಡ, ಸಂಸದರಾದ ಶೋಭಾಕರಂದ್ಲಾಜೆ, ಪಿ.ಸಿ.ಮೋಹನ್, ಮುಖಂಡ ಆರ್.ಅಶೋಕ್ ಸೇರಿದಂತೆ ಮತ್ತಿತರರು ಹೂಗುಚ್ಛ ನೀಡಿ ಬರಮಾಡಿಕೊಂಡರು. ಬಳಿಕ ಅವರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ನೀಡಲಾಯಿತು. ಮೂಲಗಳ ಪ್ರಕಾರ ಸಿ.ಸೋಮಶೇಖರ್ ಮುಂದಿನ ವಿಧಾನಸಭೆ ಚುನಾವಣೆಗೆ ತುಮಕೂರು ಜಿಲ್ಲೆ ಗುಬ್ಬಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿವೆ.

► Follow us on –  Facebook / Twitter  / Google+

Facebook Comments

Sri Raghav

Admin