ಅನಿಲ ಸೋರಿಕೆಯಾಗಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಈ ಸುದ್ದಿಯನ್ನು ಶೇರ್ ಮಾಡಿ

Gas-Leackage

ನವದೆಹಲಿ, ಮೇ 6- ಡಿಪೋದಿಂದ ಅನಿಲ ಸೋರಿಕೆಯಾಗಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಅಸ್ಪತ್ರೆಗೆ ಸೇರಿರುವ ಘಟನೆ ಇಂದು ಬೆಳಗ್ಗೆ ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ಸಂಭವಿಸಿದೆ.   ತುಘಲಕಾಬಾದ್‍ನ ರೈಲ್ವೆ ಕಾಲೋನಿಯಲ್ಲಿನ ರಾಣಿ ಝಾನ್ಸಿ ಸರ್ವೋದಯ ಕನ್ಯಾ ವಿದ್ಯಾಲಯದ ಬಳಿ ಇದ್ದ ಡಿಪೋದಿಂದ ಅನಿಲ ಸೋರಿಕೆಯಾಯಿತು. ಬೆಳಗ್ಗೆ 7.35ರಲ್ಲಿ ದೂರವಾಣಿ ಕರೆ ಸ್ವೀಕರಿಸಿದ ದೆಹಲಿ ಫೈರ್ ಸರ್ವಿಸ್‍ನ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಕಣ್ಣುರಿ ಮತ್ತು ಗಂಟಲು ಕಿರಿಕಿರಿಯಿಂದಾಗಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶಾಲೆಯ ಉಪ ಪ್ರಾಂಶುಪಾಲರು ತಿಳಿಸಿದ್ದಾರೆ.   ಅನಿಲ ಸೋರಿಕೆ ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin