ಅನುಪಮ ಸೇವಾ ಸಂಸ್ಥೆ ಸ್ಕೌಟ್ಸ್ ಆ್ಯಂಡ್ ಗೈಡ್ಸ್

ಈ ಸುದ್ದಿಯನ್ನು ಶೇರ್ ಮಾಡಿ

11

ಬಾಗಲಕೋಟೆ,ಫೆ.7- ವ್ಯಕ್ತಿ ಹೊಸದನ್ನು ಹುಡುಕಿ ಸಾಹಸಿಯಾಗುವ, ಸಮಾಜದಲ್ಲಿ ಸಭ್ಯನೆನಿಸಿಕೊಳ್ಳುವ, ತನ್ನನ್ನು ತಾನು ಪರಿಶೀಲಿಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡುವ ಒಂದು ಅನುಪಮ ಸೇವಾ ಸಂಸ್ಥೆ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‍ನ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಸಾವಳಗಿ ಹೇಳಿದರು.
ವಿದ್ಯಾ ಪ್ರಸಾರಕ ಮಂಡಳಿಯ ಎಸ್.ಆರ್. ನರಸಾಪೂರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಘಟಕದ ಅಡಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಕರ್ನಾಟಕದಲ್ಲಿ ವಿಶ್ವ ಸ್ಕೌಟಿಂಗ್ ಶತಮಾನೋತ್ಸವವನ್ನು ನಾವೆಲ್ಲ ಸಂಭ್ರಮದಿಂದ ಆಚರಿಸಿದ್ದೇವೆ. ಸ್ಕೌಟ್ ಚಳುವಳಿಯು 210 ರಾಷ್ಟ್ರಗಳಲ್ಲಿ ಹರಡಿದ್ದು, ಇದೊಂದು ಅಂತಾರಾಷ್ಟ್ರೀಯ ಜಾಗತಿಕ ಯುವ ಸಂಘಟನೆ ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಈ ಸೇವಾ ಸಂಸ್ಥೆಯನ್ನು ಸೇರಿ, ತಮ್ಮಲ್ಲಿರುವ ಪ್ರತಿಭೆಯನ್ನು ತೋರ್ಪಡಿಸಿ, ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕ್ರಮ ಸಂಘಟನಾಧಿಕಾರಿ ಶರೀಫ್ ಅವರು ಸ್ಕೌಟ್ಸ್ ಆ್ಯಂಡ್ ಗೈಡ್ಸ್‍ನ ಕಾರ್ಯಚಟುವಟಿಕೆಗಳನ್ನು ವಿವರಿಸಿ, ಅತಿಥಿಗಳನ್ನು ಬರಮಾಡಿಕೊಳ್ಳುವಾಗ ಚಪ್ಪಾಳೆಯನ್ನು ಹೇಗೆ ಹಾಕಬೇಕೆಂಬುದನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟರು. ಪ್ರಾಚಾರ್ಯ ಡಾ. ಜಿ.ಬಿ. ಕುಲಕರ್ಣಿ ಕಾಲೇಜಿನಲ್ಲಿರುವ ಎಲ್ಲ ಘಟಕಗಳ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ತಿಳಿದರು.ಸ್ಕೌಟ್ಸ್ ಆ್ಯಂಡ್ ಗೈಡ್ಸ್‍ನ ಮಹಿಳಾ ವಿಭಾಗ ಸಂಯೋಜನಾಧಿಕಾರಿ ಡಾ. ಎಸ್.ಜಿ. ನಾವಲಗಿ, ಆಯ್‍ಕ್ಯೂಎಸಿ ಸಂಯೋಜನಾಧಿಕಾರಿ ಡಾ. ಡಿ.ಜಿ. ಕುಲಕರ್ಣಿ ವೇದಿಕೆಯಲ್ಲಿದ್ದರು. ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿವೃಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin