ಅನುಮತಿಯಿಲ್ಲದೆ ಕಾರ್ಯಕ್ರಮ : ಮುತಾಲಿಕ್ ಸೇರಿ 6 ಮಂದಿಗೆ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

Pramod-Muthalik

ಮೈಸೂರು,ಅ.19- ಅನುಮತಿ ಪಡೆಯದೆ ನಗರದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿ 6 ಮಂದಿಗೆ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್, ಪ್ರೇಮ್‍ಕುಮಾರ್, ಸಂಜಯ್ ಸೇರಿದಂತೆ ಆರು ಮಂದಿಗೆ ನೋಟಿಸ್ ನೀಡಲಾಗಿದ್ದು, ಇವರ ವಿರುದ್ದ ನಗರದ ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಅನುಮತಿ ಪಡೆಯದೆ ಕಾರ್ಯಕ್ರಮ ಜಾರಿಗೊಳಿಸಿದ್ದರಿಂದ ಪೊಲೀಸರು ಇವರಿಗೆ ನೋಟಿಸ್ ಜಾರಿ ಮಾಡಿ, ಅ.25ರಂದು ಡಿಸಿಪಿ ಡಾ.ಎಚ್.ಟಿ.ಶೇಖರ್ ಅವರ ಮುಂದೆ ಹಾಜರಾಗುವಂತೆ ನೋಟಿಸ್‍ನಲ್ಲಿ ಸೂಚಿಸಲಾಗಿದೆ.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin