ಅಪಘಾತ : ಬಂಥನಾಳ ಶ್ರೀಗಳು ಅಪಾಯದಿಂದ ಪಾರು

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯಪುರ, ಮಾ.17- ಗೋವು ಸಾಗಿಸುತ್ತಿದ್ದ ವಾಹನ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿ ಕಾರ್‍ನಲ್ಲಿದ್ದ ಬಂಥನಾಳ ಶ್ರೀಗಳು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಂದ್ರಾಳ ಕ್ರಾಸ್ ಬಳಿ ನಡೆದಿದೆ.

ಕಾರಿನ ಏರ್ ಬ್ಯಾಗ್‍ನಿಂದಾಗಿ ಶ್ರೀಗಳು ಅಪಾಯದಿಂದ ಪಾರಾಗಿದ್ದಾರೆ. ಸೊಲ್ಲಾಪುರದಿಂದ ಇಂಡಿ ಕಡೆಗೆ ಆಗಮಿಸುತ್ತಿದ್ದ ಬಂಥನಾಳ ಸ್ವಾಮೀಜಿಗಳ ಕಾರು ಹಾಗೂ ಸೊಲ್ಲಾಪುರಕ್ಕೆ ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ವಾಹನದ ನಡುವೆ ಅಪಘಾತ ಸಂಭವಿಸಿದೆ.

ಗೋವು ಸಾಗಿಸುತ್ತಿದ್ದ 6 ಜನ ಖದೀಮರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಗೊಂಡ ಶ್ರೀಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ