ಅಪಘಾತ ಸ್ಥಳಕ್ಕೆ ಬರದ ಆಂಬುಲೆನ್ಸ್

ಈ ಸುದ್ದಿಯನ್ನು ಶೇರ್ ಮಾಡಿ

Tumakuru-5

ತುಮಕೂರು, ಆ.10- ಅಪಘಾತ ಸಂಭವಿಸಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಲು ಪೊಲೀಸರಿಗೆ ಸರಾಗಲಿ, ಆ್ಯಂಬುಲೆನ್ಸ್‍ನವರಾಗಲೀ ಒಂದು ಗಂಟೆಯಾದರೂ ಬಾರದೇ ಇರುವುದರಿಂದ ಆಕ್ರೋಶಗೊಂಡ ಸ್ಥಳೀಯರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.ಇಂದು ಬೆಳಗ್ಗೆ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಬೆಳಚಗೆರೆ ರಾಷ್ಟ್ರೀಯ ಹೆದ್ದಾರಿ 206ರ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು.

ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನ ತಲೆ ಪೆಟ್ಟು ಬಿದ್ದು ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದನು. ಇದನ್ನು ಕಂಡ ಸ್ಥಳೀಯರು ಗುಬ್ಬಿ ಪೊಲೀಸರಿಗೆ  ಮತ್ತು ಆ್ಯಂಬುಲೆನ್ಸ್‍ನವರಿಗೆ ಮಾಹಿತಿ ನೀಡಿದರೂ ಯಾರು ಬಾರದೇ ಇರುವುದನ್ನು ಕಂಡ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು.ಅಪಘಾತ ಸಂಭವಿಸುತ್ತಿದ್ದಂತೆ ಕಾರಿನ ಚಾಲಕ ಪರಾರಿಯಾಗಿದ್ದು, ಅಪಘಾತಕ್ಕೊಳಗಾದ ಸವಾರನ ಮಾಹಿತಿ ತಿಳಿದು ಬಂದಿಲ್ಲ. ಈತ ದಿಬ್ಬೂರು ಗ್ರಾಮ ನಿವಾಸಿ ಎಂದು ಹೇಳಲಾಗುತ್ತಿದೆ.ನಂತರ ಸ್ಥಳಕ್ಕೆ ಸಬ್ ಇನ್ಸ್‍ಪೆಕ್ಟರ್ ಗಂಗಾಧರ್ ಭೇಟಿ ನೀಡಿ ಪರಿಶೀಲಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin