ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಕಾಮುಕನ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

rape--case

ಮಂಡ್ಯ,ಮಾ.3- ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಕಾಮುಕನನ್ನು ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಕುಂಬಾರಬೀದಿ ನಿವಾಸಿ ನಾಗರಾಜ್(31) ಬಂಧಿತ.ಕಳೆದ ಹದಿನೈದು ದಿನಗಳ ಹಿಂದೆ ಬಾಲಕಿ ಕಾಣೆಯಾಗಿರುವ ಬಗ್ಗೆ ಆಕೆಯ ಪೋ ಷಕರು ಶ್ರೀರಂಗಪಟ್ಟಣ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ಕೈಗೆತ್ತಿಕೊಂಡ ಪೊಲೀಸರು ನಾಗರಾಜ್ ಮೇಲೆ ಅನುಮಾನಗೊಂಡು ಠಾಣೆಗೆ ಕರೆಸಿ ವಿಚಾರಿಸಿದಾಗ ಬಾಲಕಿಯನ್ನು ಅಪಹರಿಸಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ನಂತರ ಬಾಲಕಿಯನ್ನು ಠಾಣೆಗೆ ಕರೆತಂದಾಗ ಅತ್ಯಾಚಾರವೆಸಗಿರುವ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾಳೆ. ನಾಗರಾಜ್ ವಿವಾಹಿತನಾಗಿದ್ದು, ಮಾಟಮಂತ್ರ-ವಾಮಚಾರ ನಡೆಸುತ್ತಿದ್ದನು ಎಂದು ಹೇಳಲಾಗಿದೆ. ಈ ಸಂಬಂಧ ಕಾಮುಕ ನಾಗರಾಜನನ್ನು ಬಂಧಿಸಿರುವ ಶ್ರೀರಂಗಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin