ಅಭಿವೃದ್ಧಿ ಕಾರ್ಯಗಳ ಪರಿಶೀಲನಾ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

2

ಬೆಳಗಾವಿ,ಅ5- ಮಹಾನಗರ ಪಾಲಿಕೆ ಹಾಗೂ ಬುಡಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯು ಸಂಸದ ಸುರೇಶ ಅಂಗಡಿ ನೇತೃತ್ವದಲ್ಲಿ ಇಂದು ನಗರದಲ್ಲಿ ನಡೆಯಿತು.ಸಭೆಯಲ್ಲಿ ರಿಂಗ್ ರಸ್ತೆ ನಿರ್ಮಾಣ, ನಗರದ ರಸ್ತೆಗಳ ಅಭಿವೃದ್ಧಿ, ಓವರ್ ಬ್ರಿಡ್ಜ್‍ಗಳ ನಿರ್ಮಾಣ, ಬೈಪಾಸ್ ರಸ್ತೆ ನಿರ್ಮಾಣದ ಕಾಮಗಾರಿ ಮತ್ತು ಯೋಜನೆಗಳ ಬಗ್ಗೆ ಸಂಸದರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ದ್ಯಾಮನ್ನವರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾ ಕೈಗಾರಿಕಾ ಇಲಾಖೆ, ಬುಡಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin