ಅಮಾನತಾಗಿರುವ ಶಾಸಕರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಹೆಚ್ಡಿಕೆ
ಈ ಸುದ್ದಿಯನ್ನು ಶೇರ್ ಮಾಡಿ
ಮಂಡ್ಯ,ಅ.13- ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದ ಜೆಡಿಎಸ್ ಕಾರ್ಯಕರ್ತ ನಾರಾಯಣ ಎಂಬುವರ ಮನೆಗೆ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪಕ್ಷದಿಂದ ಅಮಾನತಾಗಿರುವ ಶಾಸಕರನ್ನು ಯಾವದೇ ಕಾರಣಕ್ಕೂ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಕುಮಾರಸ್ವಾಮಿ ಅವರೊಂದಿಗೆ ಸಂಸದ ಸಿ.ಎಸ್.ಪುಟ್ಟರಾಜು, ಶಾಸಕ ಡಿ.ಸಿ.ತಮ್ಮಣ್ಣ , ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮತ್ತಿತರರು ಉಪಸ್ಥಿತರಿದ್ದರು.
► Follow us on – Facebook / Twitter / Google+
Facebook Comments