ಅಮಿತ್ ಶೂಟೌಟ್ ಪ್ರಕರಣ : ಆರೋಪಿ ರಾಜೇಶ್‍ಗೆ 2 ವಾರಗಳ ಕಾಲ ನ್ಯಾಯಾಂಗ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Amith-Shruthi-Murder-Love

ಬೆಂಗಳೂರು, ಜ.18- ವಕೀಲ ಅಮಿತ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಾಜೇಶ್‍ಗೆ ಎರಡು ವಾರಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸರು ಪ್ರಮುಖ ಆರೋಪಿ ರಾಜೇಶ್‍ನನ್ನು ಇಂದು ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟರ್ ಮುಂದೆ ಹಾಜರುಪಡಿಸಿದಾಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಈ ಪ್ರಕರಣದ ಎರಡನೆ ಆರೋಪಿಯಾಗಿರುವ ರಾಜೇಶ್ ತಂದೆ ಗೋಪಾಲ್‍ಕೃಷ್ಣ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೆಸರಘಟ್ಟ ಮುಖ್ಯರಸ್ತೆಯಲ್ಲಿನ ಆಚಾರ್ಯ ಕಾಲೇಜು ಸಮೀಪ ಶುಕ್ರವಾರ ಮಧ್ಯಾಹ್ನ ರಾಜೇಶ್ ಪತ್ನಿಯ ಪರಿಚಯಸ್ಥ ಅಮಿತ್ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ನಂತರ ಪಿಡಿಒ ಆಗಿದ್ದ ರಾಜೇಶ್ ಪತ್ನಿ ಶೃತಿಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶೃತಿಗೌಡ ಪತಿ ರಾಜೇಶ್ ಹಾಗೂ ಮಾವ ಗೋಪಾಲಕೃಷ್ಣ ಪೊಲೀಸರಿಗೆ ಶರಣಾಗಿದ್ದಾರೆ.

ಠಾಣೆಯಲ್ಲಿ ತಂದೆ ಮತ್ತು ಮಗ ಕೊಲೆ ಮಾಡಿದ್ದು ನಾನು ನಾನು ಎಂದು ಗೊಂದಲದ ಹೇಳಿಕೆ ನೀಡಿದ್ದರು. ಈ ಸಂಬಂಧ ವಿಚಾರಣೆ ನಡೆಯುತ್ತಿದೆ. ಹೆಚ್ಚಿನ ವಿಚಾರಣೆಗೆ ಪೊಲೀಸರು ರಾಜೇಶ್‍ನನ್ನು ವಶಕ್ಕೆ ಪಡೆದಿದ್ದರು. ಇಂದು ನ್ಯಾಯಾಲಯ ರಾಜೇಶ್‍ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin