ಅಮಿತ್ ಷಾ ಸಮ್ಮುಖದಲ್ಲಿ ಬಿಜೆಪಿ ಸೇರಿದ ಮಾಲೀಕಯ್ಯ ಗುತ್ತೇದಾರ್

ಈ ಸುದ್ದಿಯನ್ನು ಶೇರ್ ಮಾಡಿ

Amit-shsha--01

ನವದೆಹಲಿ. ಏ. 08 : ಇ0ದು ನವದೆಹಲಿಯ ಭಾರತೀಯ ಜನತಾ ಪಾರ್ಟಿಯ ಕೇ0ದ್ರ ಕಚೇರಿಯಲ್ಲಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಸಮ್ಮುಖದಲ್ಲಿ, ಉತ್ತರ ಕರ್ನಾಟಕದ ಪ್ರಭಾವಿ ಮುಖ0ಡರು, ಆರು ಬಾರಿ ಶಾಸಕಾಗಿ ಆಯ್ಕೆಯಾಗಿ, ಮಾಜಿ ಸಚಿವರಾಗಿ ಸೇವೆ ಸಲ್ಲಿಸಿರುವ ಹಿ0ದುಳಿದ ವರ್ಗಗಳ ನಾಯಕ, ಲೋಕಸಭೆಯಲ್ಲಿ ಕಾ0ಗ್ರೆಸ್ ಪಕ್ಷದ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಕ್ಷೇತ್ರದ ವ್ಯಾಪ್ತಿಯ ಅಫ್ಝಲ್ ಪುರದ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಮತ್ತು ಯಾದಗಿರಿ ನಗರಸಭೆಯ ಅಧ್ಯಕ್ಷೆ ಲಲಿತಾ ಅ0ಪುರ್ ರವರು ಬಿಜೆಪಿಗೆ ಸೇರ್ಪಡೆಗೊ0ಡರು. ಈ ಸ0ದರ್ಭದಲ್ಲಿ, ಕೇ0ದ್ರ ಸಚಿವ ಅನ0ತಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮುರಳೀಧರ್ ರಾವ್, ಸ0ಸತ್ ಸದಸ್ಯರಾದ ಶ್ರೀ ಶ್ರೀರಾಮುಲು ಮೊದಲಾದ ನಾಯಕರು ಉಪಸ್ಥಿತರಿದ್ದರು.

Facebook Comments

Sri Raghav

Admin