ಅಮೂಲ್ಯ ನಿಶ್ಚಿತಾರ್ಥ

ಈ ಸುದ್ದಿಯನ್ನು ಶೇರ್ ಮಾಡಿ

Amoolya--01

ಬೆಂಗಳೂರು,ಮಾ.6- ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ನಿಶ್ಚಿತಾರ್ಥ ಕೆಂಗೇರಿಯ ಸಾಯಿ ಕಲ್ಯಾಣ ಮಂಟಪದಲ್ಲಿ ಇಂದು ಸಂಜೆ 6 ಗಂಟೆಗೆ ಅದ್ಧೂರಿಯಾಗಿ ನಡೆಯಲಿದೆ. 2001ರಲ್ಲಿ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದ ಅಮೂಲ್ಯ ಪರ್ವ, ಲಾಲಿಹಾಡು, ಮಂಡ್ಯ, ತಿಮ್ಮ , ನಮ್ಮ ಬಸವ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.  2007ರಲ್ಲಿ ಚೆಲುವಿನ ಚಿತ್ತಾರ ಚಿತ್ರದ ಮೂಲಕ ನಾಯಕಿನಟಿಯಾದ ಅಮೂಲ್ಯ ಚೈತ್ರದ ಚಂದ್ರಮ, ಪ್ರೇಮಿಸಂ, ನಾನು ನನ್ನ ಕನಸು, ಶ್ರಾವಣಿ, ಸುಬ್ರಹ್ಮಣ್ಯ, ಗಜಕೇಸರಿ, ಮದುವೆಯ ಮಮತೆಯ ಕರೆಯೋಲೆ, ಕೃಷ್ಣ ರುಕ್ಮಿಣಿ ಚಿತ್ರ ಸೇರಿದಂತೆ ಹಲವಾರು ಕನ್ನಡ ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.

ಪಾಲಿಕೆಯ ಮಾಜಿ ಸದಸ್ಯ ರಾಮಚಂದ್ರಪ್ಪ ಅವರ ಪುತ್ರ ಜಗದೀಶ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಇವರ ಮದುವೆ ಮೇ ತಿಂಗಳ ಕೊನೆಯ ವಾರ ಅಥವಾ ಜೂನ್ ತಿಂಗಳ ಮೊದಲ ವಾರದಲ್ಲಿನಡೆಯುವ ಸಾಧ್ಯತೆಯಿದೆ. ನಿಶ್ಚಿತಾರ್ಥಕ್ಕೆ ರಾಜಕೀಯ ಗಣ್ಯರು, ಸಿನಿಮಾರಂಗದ ನಾಯಕ ನಟ ಗಣೇಶ್ ಹಾಗೂ ಅವರ ಪತ್ನಿ ಶಿಲ್ಪಾ ಗಣೇಶ್ ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin