ಅಮೃತಶಿಲೆಯ ಮಂಟಪ ನಿರ್ಮಾಣ ಅತೀ ಶೀಘ್ರದಲ್ಲಿ ಪೂರ್ಣ : ಮಹದೇವಪ್ರಸಾದ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಏ.14- ಮೈಸೂರಿನ ಪುರಭವನದ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಅಮೃತಶಿಲೆಯ ಮಂಟಪವನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ರಸಾದ್ ತಿಳಿಸಿದರು. ನಗರದ ಪುರಭವನದ ಆವರಣದಲ್ಲಿ ಅಂಬೇಡ್ಕರ್ ಅವರ ಪ್ರತಿಮೆಗೆ ಸಚಿವ ಮಹದೇವಪ್ಪ ಅವರು ಮಾಲಾರ್ಪಣೆ ಮಾಡಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಈ ಕಾಮಗಾರಿಯನ್ನು ಪೂರ್ಣಗೊಳ್ಳಿಸುತ್ತೇವೆ. ಅಮೃತ ಶಿಲೆಯ ಮಂಟಪ ವಿಶ್ವದಲ್ಲೇ ಎಲ್ಲೂ ಇಲ್ಲ. ಅದನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣ ಮಾಡುತ್ತಿದ್ದೇವೆ ಎಂದು ಹೇಳಿದರು.

ನಗರದಲ್ಲಿ ನಿರ್ಮಿಸಲಾಗುತ್ತಿರುವ ಅಂಬೇಡ್ಕರ್ ಭವನದ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಅದು ಸಹ ಅತಿ ಶೀಘ್ರದಲ್ಲಿ ಪೂರ್ಣಗೊಳಿಸುವುದಾಗಿ ಹೇಳಿದರು. ಉಪಚುನಾವಣೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಮುಗಿದ ಅಧ್ಯಾಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿವೃದ್ದಿ ಕಾರ್ಯಗಳನ್ನು ನೋಡಿ ಜನ ಮತ ಹಾಕಿ ಗೆಲ್ಲಿಸಿದ್ದಾರೆ ಎಂದರು.

ಪರಿಹಾರ: ನಿನ್ನೆ ಸಂಜೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಅಂಬೇಡ್ಕರ್‍ಅ ವರ ಭಾರೀ ಕಟೌಟ್ ನಿರ್ಮಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದ ಮಣಿಕಂಠ, ಪೇಂಟರ್ ಕುಮಾರ್, ಟೈಲ್ಸ್ ಕೆಲಸ ಮಾಡುತ್ತಿದ್ದ ಶಿವು ಎಂಬ ಮೂವರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ.ಗಳನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin