ಅಮೆರಿಕದಲ್ಲಿ ಭಾರತೀಯರ ಹತ್ಯೆ : ಖರ್ಗೆ ವಾಗ್ದಾಳಿ, ಮುಂದಿನವಾರ ಸರ್ಕಾರ ಅಧಿಕೃತ ಹೇಳಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Mallikarjun-Kharge

ನವದೆಹಲಿ,ಮಾ.9- ಅಮೆರಿಕದಲ್ಲಿ ಭಾರತೀಯರ ವಿರುದ್ಧ ಹೆಚ್ಚುತ್ತಿರುವ ಜನಾಂಗೀಯ ದ್ವೇಷದ ಕಗ್ಗೊಲೆ ಮತ್ತು ಹಿಂಸಾಚಾರಗಳನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ. ಈ ವಿಷಯದ ಬಗ್ಗೆ ಮುಂದಿನ ವಾರ ಸಂಸತ್‍ನಲ್ಲಿ ಅಧಿಕೃತ ಹೇಳಿಕೆ ನೀಡುವುದಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.   ಲೋಕಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಇಂದು ಈ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಎಂ.ಮಲ್ಲಿಕಾರ್ಜುನ ಅವರ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ ಮೇಲೆ ಅಮೆರಿಕದಲ್ಲಿ ಜನಾಂಗೀಯ ಹಿಂಸಾಚಾರ ಹೆಚ್ಚಾಗುತ್ತಿದೆ. ಇತ್ತೀಚೆಗೆ ಇಬ್ಬರು ಭಾರತೀಯರು ವರ್ಣ ದ್ವೇಷದ ದಳ್ಳುರಿಗೆ ಬಲಿಯಾಗಿದ್ದಾರೆ. ಆದರೆ ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಟೀಕಿಸಿದರು. ಖರ್ಗೆ ಹೇಳಿಕೆಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಸದಸ್ಯರು ದನಿಗೂಡಿಸಿದರು.

ಎಲ್ಲ ವಿಷಯಗಳನ್ನು ಟ್ವಿಟ್ ಮಾಡುವ ಪ್ರಧಾನಿ ಮೋದಿಯವರು ಅಮೆರಿಕದಲ್ಲಿ ನಡೆದ ಇಬ್ಬರು ಭಾರತೀಯರ ಹತ್ಯೆ ಹಾಗೂ ಮತ್ತೊಬ್ಬನ ಹತ್ಯೆ ಯತ್ನದ ಬಗ್ಗೆ ಏಕೆ ಒಂದೂ ಟ್ವಿಟ್ ಮಾಡಿಲ್ಲ ಎಂದು ಅವರು ಪ್ರಶ್ನಿಸಿದರು.   ಅಮೆರಿಕದಲ್ಲಿ ನೆಲೆಸಿರುವ ಭಾರತೀಯರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಕೇಂದ್ರ ವಿಫಲವಾಗಿದೆ. ಜನಾಂಗೀಯ ದ್ವೇಷದ ಹಿಂಸಾಚಾರ ತಡೆಯಲು ಮೋದಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.   ಇದಕ್ಕೆ ಉತ್ತರಿಸಿದ ರಾಜನಾಥ್ ಸಿಂಗ್ ಈ ವಿಷಯವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಮೆರಿಕದಲ್ಲಿರುವ ಭಾರತೀಯರಿಗೆ ಸೂಕ್ತ ರಕ್ಷಣೆ ಒದಗಿಸಲು ನಾವು ಬದ್ಧರಾಗಿದ್ದೇವೆ. ಈ ವಿಷಯದ ಬಗ್ಗೆ ಮುಂದಿನ ವಾರ ಸದನದಲ್ಲಿ ಹೇಳಿಕೆ ನೀಡುವುದಾಗಿ ತಿಳಿಸಿದರು.

ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಮಾತನಾಡಿ, ಅಮೆರಕದಲ್ಲಿ ನಡೆದ ಜನಾಂಗೀಯ ದ್ವೇಷ ಘಟನೆಗಳ ಬಗ್ಗೆ ಸರ್ಕಾರಕ್ಕೆ ತುಂಬ ಕಳವಳ ಉಂಟಾಗಿದೆ. ಅಲ್ಲಿರುವ ಭಾರತೀಯರ ರಕ್ಷಣೆ ಬಗ್ಗೆ ನಮಗೆ ಕಾಳಜಿ-ಕಳಕಳಿ ಇದೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin