ಅಮ್ನೆಸ್ಟಿ ನಿಷೇಧಕ್ಕೆ ರಾಜ್ಯಾದ್ಯಂತ ಬಿಜೆಪಿ ಬೃಹತ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

BJP-1
ಬೆಂಗಳೂರು, ಆ.24-ಭಾರತೀಯ ಸೇನೆ ವಿರುದ್ಧ ಧಿಕ್ಕಾರ ಹಾಗೂ ಪಾಕಿಸ್ತಾನ ಪರ ಜೈಕಾರದ ಘೋಷಣೆ ಕೂಗಿದವರನ್ನು ದೇಶದ್ರೋಹದಡಿ ಬಂಧಿಸುವುದು ಹಾಗೂ ಈ ಘಟನೆಗೆ ಕಾರಣೀಭೂತರಾದ ಅಮ್ನೆಸ್ಟಿ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿತು.  ರಾಜಧಾನಿ ಬೆಂಗಳೂರು, ಮೈಸೂರು, ತುಮಕೂರು, ಗದಗ, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಶಿವಮೊಗ್ಗಗಳಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ದೇಶದ್ರೋಹಿಗಳ ಮೇಲೆ ಕೂಡಲೇ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.  ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪುರಭವನದ ಮುಂಭಾಗ ಭಾರೀ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಅಮ್ನೆಸ್ಟಿ ವಿರುದ್ಧ ಪ್ರತಿಭಟನೆ ನಡೆಸಿ ಆ ಸಂಸ್ಥೆಯ ವಿರುದ್ಧ ತಕ್ಷಣ ಕ್ರಮ ಜರುಗಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

BJP-2

ಜಿಲ್ಲಾ ಕೇಂದ್ರಗಳಲ್ಲಿ ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ದೇಶದ್ರೋಹ ಚಟುವಟಿಕೆ ನಡೆಸಿರುವುದು ಸಾಬೀತಾಗಿದ್ದರೂ ರಾಜ್ಯ ಸರ್ಕಾರ ಅಮ್ನೆಸ್ಟಿ ಸಂಘಟನೆ ವಿರುದ್ಧ ಕ್ರಮ ಜರುಗಿಸದೆ ಪ್ರಕರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಪಿತೂತಿ ನಡೆಸುತ್ತಿದೆ ಎಂದು ದೂರಿದರು. ಘಟನೆ ನಡೆದ ಬಳಿಕ ಅಮ್ನೆಸ್ಟಿ ಸಂಘಟನೆ ವಿರುದ್ಧ ಬೆಂಗಳೂರಿನ ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಸಂಘಟನೆ ವಿರುದ್ಧ ಕ್ರಮಕೈಗೊಳ್ಳಬಾರದೆಂದು ಕಾಂಗ್ರೆಸ್ ವರಿಷ್ಠರು ಒತ್ತಡ ಹಾಕಿದ ನಂತರ ಇಡೀ ಪ್ರಕರಣವನ್ನೇ ಮುಚ್ಚಿ ಹಾಖಿ ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಜಾರ್ಜ್ ನಡೆಸಿ ದೂರು ದಾಖಲಿಸಿದ್ದಾರೆ. ದೇಶಭಕ್ತರಿಗೆ ಶಿಕ್ಷೆ, ದೇಶದ್ರೋಹಿಗಳಿಗೆ ರಕ್ಷಣೆಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ತಕ್ಷಣ ಸಂಘಟನೆಯ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾನಿರತರು ಎಚ್ಚರಿಸಿದ್ದಾರೆ.

BJP-3

ಹುಬ್ಬಳ್ಳಿ:

ಪಾಕಿಸ್ತಾನ ಪರ ಮಾತನಾಡಿರುವ ಚಲನಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಹಾಗೂ ಆಮ್ನೆಸ್ಟಿ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ ಮೂಲಕ ಬೃಹತ್ ರ್ಯಾ ಲಿ ನಡೆಸಿತು.
ಪ್ರತಿಭಟನಾಕಾರರು ಬೆಳಗ್ಗೆ ಹುಬ್ಬಳ್ಳಿ ನಗರದ ಕೋರ್ಟ್ ಸರ್ಕಲ್ನಿಂದ ತಹಸೀಲ್ದಾರ್ ಕಚೇರಿವರೆಗೂ ರ್ಯಾ ಲಿ ಮೂಲಕ ತೆರಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.

ಚಿಕ್ಕಮಗಳೂರು:

ದೇಶವಿರೋಧಿ ಘೋಷಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಹಾಗೂ ಪಾಕಿಸ್ತಾನ ಪರ ಮಾತನಾಡಿರುವ ರಮ್ಯಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ಆಮ್ನೆಸ್ಟಿ ಸಂಘಟನೆಯನ್ನು ರದ್ದು ಮಾಡಬೇಕು, ದೇಶವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ ಚಿಕ್ಕಮಗಳೂರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

► Follow us on –  Facebook / Twitter  / Google+

Facebook Comments

Sri Raghav

Admin