‘ಅಮ್ಮ’ನಿಗೆ ಅನಾರೋಗ್ಯ , ಅಪೋಲೋ ಆಸ್ಪತ್ರೆಗೆ ಜಯಲಲಿತ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Amma

ಚೆನ್ನೈ, ಸೆ.23- ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಅನಾರೋಗ್ಯ ತೊಂದರೆಯಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಸಿಎಂ ಜಯಲಲಿತಾ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಜ್ವರ ಮತ್ತು ಡಿಹೈಡ್ರೇಶನ್( ನಿರ್ಜಲಿಕರಣ) ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.  ಜಯಲಲಿತ ಅವರನ್ನು ತೀವ್ರನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೊ ಹಾಸ್ಪಿಟಲ್ನ ಮುಖ್ಯ ನಿರ್ವಹಣಾ ಅಧಿಕಾರಿ ಸುಬ್ಬಯ್ಯ ವಿಶ್ವನಾಥನ್ ತಿಳಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಅವರು ಆಸ್ಪತ್ರೆಗೆ ದಾಖಲಾದ ನಂತರ ಭಾರೀ ಸಂಖ್ಯೆಯಲ್ಲಿ ಎಐಎಡಿಎಂಕೆ ಕಾರ್ಯಕರ್ತರು ಹಾಸ್ಪಿಟಲ್ ಮುಂದೆ ಜಮಾಯಿಸಿದ್ದು, ಸಿಎಂ ಜಯಲಲಿತಾ ಶೀಘ್ರ ಗುಣಮುಖರಾಗಲಿ ಪ್ರಾರ್ಥಿಸುತ್ತಿದ್ದಾರೆ.

ಅಮ್ಮ ಗುಣಮುಖರಾಗುತ್ತಿದ್ದಾರೆ, ಅವರನ್ನು ಇಂದು ಮನೆಗೆ ವಾಪಸ್ ಕರೆದುಕೊಂಡು ಹೋಗಲಿದ್ದೇವೆ. ಅಂತಹ ಕ್ಷಣಕ್ಕಾಗಿ ನಾವು ಕಾಯುತ್ತಿದ್ದೇವೆ ಎಂದು ಎಐಎಡಿಎಂಕೆ ಪಕ್ಷದ ವಕ್ತಾರೆ ಸಿ. ಆರ್. ಸರಸ್ವತಿ ತಿಳಿಸಿದರು. ನಿನ್ನೆ ತೀವ್ರ ಬಳಲಿದ್ದ ಜಯಲಲಿತಾ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಲಾಗಿದೆ. ಆದರೂ, ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು, ಜಯಲಲಿತಾ ಅಭಿಮಾನಿಗಳು ಆತಂಕದಿಂದ ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ.

b1eb0d24-9ad5-4cbb-b4b7-5bdd2bc5ed4f

ಜಯಲಲಿತಾ ಅವರನ್ನು ತೀವ್ರನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೊ ಹಾಸ್ಪಿಟಲ್ ಮುಖ್ಯ ನಿರ್ವಹಣಾಧಿಕಾರಿ ಸುಬ್ಬಯ್ಯ ವಿಶ್ವನಾಥನ್ ತಿಳಿಸಿದ್ದಾರೆ.
ಇನ್ನು ಮುಖ್ಯಮಂತ್ರಿ ಅವರು ಆಸ್ಪತ್ರೆಗೆ ದಾಖಲಾದ ನಂತರ ಭಾರೀ ಸಂಖ್ಯೆಯಲ್ಲಿ ಎಐಎಡಿಎಂಕೆ ಕಾರ್ಯಕರ್ತರು ಹಾಸ್ಪಿಟಲ್ ಮುಂದೆ ಜಮಾಯಿಸಿದ್ದು, ಸಿಎಂ ಜಯಲಲಿತಾ ಶೀಘ್ರ ಗುಣಮುಖರಾಗಲಿ ಪ್ರಾರ್ಥಿಸುತ್ತಿದ್ದಾರೆ.

90457968-dfc4-4458-8907-65392c768c4a

 

► Follow us on –  Facebook / Twitter  / Google+

Facebook Comments

Sri Raghav

Admin