ಅಯೋಧ್ಯೆಯ ರಾಮಮಂದಿರ ವಿವಾದದ ತ್ವರಿತ ವಿಚಾರಣೆಗೆ ಸುಪ್ರೀಂ ನಕಾರ

ಈ ಸುದ್ದಿಯನ್ನು ಶೇರ್ ಮಾಡಿ

Ram-Mandir-----01

ನವದೆಹಲಿ,ಮಾ.31-ಅಯೋಧ್ಯೆಯ ರಾಮಮಂದಿರ ವಿವಾದವನ್ನು ಶೀಘ್ರ ಇತ್ಯರ್ಥಪಡಿಸಲು ತ್ವರಿತ ವಿಚಾರಣೆ ಕೈಗೊಳ್ಳಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. ಬಿಜೆಪಿ ಮುಖಂಡ ಡಾ.ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿದ್ದ ಮನವಿಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ಈ ಗಂಭೀರ ಪ್ರಕರಣದ ಬಗ್ಗೆ ಶೀಘ್ರ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು.   ಈ ಪ್ರಕರಣದ ತ್ವರಿತ ವಿಚಾರಣೆ ನಡೆಸಲು ನಮ್ಮಲ್ಲಿ ಸಮಯ ಇಲ್ಲ. ಇದು ಎರಡು ಧರ್ಮಗಳ ಭಾವನಾತ್ಮಕ ವಿಷಯವಾಗಿದೆ. ಇದರ ಕೂಲಂಕುಷ ವಿಚಾರಣೆಗೆ ಸಾಕಷ್ಟು ಸಮಯ ಬೇಕಾಗುತ್ತದೆ. ಆದ್ದರಿಂದ ತ್ವರಿತ ವಿಚಾರಣೆ ನಡೆಸಲು ಅಸಾಧ್ಯ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಪೀಠವು ಹೇಳಿದೆ.

ಈ ಹಿಂದೆ ಈ ಕುರಿತು ಅರ್ಜಿ ವಿಚಾರಣೆ ಬಂದ ಸಂದರ್ಭದಲ್ಲಿ ವಿವಾದಕ್ಕೆ ಸಂಬಂಧಪಟ್ಟ ಎಲ್ಲರೂ ಒಗ್ಗೂಡಿ ಪರಸ್ಪರ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಖೇಹರ್ ಸಲಹೆ ನೀಡಿದ್ದರು. ಅಲ್ಲದೆ ಅಗತ್ಯವಿದ್ದರೆ ತಾವು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ತಿಳಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin