ಅರಣ್ಯರಕ್ಷಕ ಮುರುಗೆಪ್ಪ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ

ಈ ಸುದ್ದಿಯನ್ನು ಶೇರ್ ಮಾಡಿ

Murugeppa--01

ಬೆಂಗಳೂರು, ಫೆ.20– ಚಾಮರಾಜನಗರ ಜಿಲ್ಲೆ ಬಂಡೀಪುರ ವಲಯದ ಕಲ್ಕೆರೆ ಅರಣ್ಯ ಭಾಗದಲ್ಲಿ ಬೆಂಕಿ ನಂದಿಸುವಾಗ ಸಜೀವದಹನವಾದ ಅರಣ್ಯ ರಕ್ಷಕ ಮುರುಗೆಪ್ಪ ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಅರಣ್ಯ ಸಚಿವ ರಮಾನಾಥರೈ ತಿಳಿಸಿದರು.  ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೈಗರ್ ಫೌಂಡೇಶನ್ ವತಿಯಿಂದ ಮುರುಗೆಪ್ಪ ಅವರ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತಿದೆ. ಜತೆಗೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಮತ್ತು ಮುರುಗೆಪ್ಪನ ಸಾವಿನಲ್ಲಿ ಅಧಿಕಾರಿಗಳ ಲೋಪದೋಷವಿದೆಯೇ ಎಂಬುದನ್ನು ಪತ್ತೆಹಚ್ಚಲು ವಿಶೇಷ ಅಧಿಕಾರಿಗಳಿಂದ ತನಿಖೆ ನಡೆಸಲಾಗುವುದು ಎಂದರು.

ಈಗಾಗಲೇ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಹೊಸಮಠ್ ಅವರು ಸ್ಥಳಕ್ಕೆ ತೆರಳಿ ಅಲ್ಲಿ ಎಲ್ಲಾ ಕಾರ್ಯಗಳ ಉಸ್ತುವಾರಿ ನೋಡಿಕೊಂಡಿದ್ದಾರೆ. ನಾನು ನಾಳೆ ಅಲ್ಲಿಗೆ ಭೇಟಿ ನೀಡುತ್ತಿದ್ದೇನೆ ಎಂದು ಹೇಳಿದರು.  ಮುಂಚೂಣಿ ಅರಣ್ಯ ಸಿಬ್ಬಂದಿಗಳಿಗೆ ತಿಂಗಳಿಗೆ ಅಪಾಯಕಾರಿ ಕೆಲಸದ ಭತ್ಯೆಯನ್ನಾಗಿ ಮೂರೂವರೆ ಸಾವಿರ ನೀಡಲಾಗುತ್ತಿದೆ. ಬೇರೆ ಯಾವ ರಾಜ್ಯದಲ್ಲೂ ಈ ಸೌಲಭ್ಯ ಇಲ್ಲ. ಅರಣ್ಯ ಸಿಬ್ಬಂದಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಅರಣ್ಯ ಪಾಲಕ ಮುರುಗೆಪ್ಪ ಅಂತ್ಯಕ್ರಿಯೆ : 
ವಿಜಯಪುರ, ಫೆ.20- ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚಿಗೆ ಬಲಿಯಾದ ಅರಣ್ಯಪಾಲಕ ಮುರುಗೆಪ್ಪ ತಮ್ಮಣ್ಣಗೋಳ ಅಂತ್ಯಕ್ರಿಯೆ ಇಂದು ಜಿಲ್ಲೆಯ ಸಿಂಧಗಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ನೆರವೇರಿತು. ಎರಡು ದಿನಗಳ ಹಿಂದೆ ಬಂಡೀಪುರ ಅರಣ್ಯಪ್ರದೇಶದಲ್ಲಿ ಉಂಟಾದ ಕಾಡ್ಗಿಚ್ಚಿನಲ್ಲಿ ಸಜೀವ ದಹನವಾಗಿದ್ದ ಮುರುಗೆಪ್ಪ ತಮ್ಮಣ್ಣಗೋಳ(32)ಅವರ ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಅರಣ್ಯ ಇಲಾಖೆ ಸಕಲ ಗೌರವಗಳೊಂದಿಗೆ ನೆರವೇರಿಸಿತು.  ಸಾವಿರಾರು ಗ್ರಾಮಸ್ಥರ ಸಮ್ಮುಖದಲ್ಲಿ ಗೌರವ ನಮನ ಸಲ್ಲಿಸಿ ಹಿರಿಯ ಅಧಿಕಾರಿಗಳು ಗೌರವಾರ್ಪಣೆ ಮಾಡಿದರು. ಮುರುಗೆಪ್ಪ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಇಡೀ ಅಲಗೂರು ಗ್ರಾಮದಲ್ಲಿ ಶೋಕ ಮಡುಗಟ್ಟಿತ್ತು. ಕುಟುಂಬ ಸದಸ್ಯರ ರೋಧನ ಮುಗಿಲು ಮುಟ್ಟಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin