ಅರಮನೆಯಲ್ಲಿ ಸಿಂಹಾಸನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ಈ ಸುದ್ದಿಯನ್ನು ಶೇರ್ ಮಾಡಿ

Yaduveer--01

ಮೈಸೂರು, ಸೆ.25- ಯದುವಂಶದ ಅರಸರಿಗೆ ಬಳುವಳಿಯಾಗಿ ಬಂದ ವಿಜಯನಗರ ಅರಸರ ಕಾಲದ ರತ್ನಖಚಿತ ಸಿಂಹಾಸನವನ್ನು ಅರಮನೆಯಲ್ಲಿ ಸಾರ್ವಜನಿಕರು ವೀಕ್ಷಿಸಬಹುದಾಗಿದೆ. ಸೆ.30ರ ವರೆಗೆ ಸಿಂಹಾಸನವನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದ್ದು, ಭಾನುವಾರದಿಂದಲೇ ಸಿಂಹಾಸನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.  ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ 50ರೂ. ನಿಗದಿಪಡಿಸಿದರೆ ಸಿಂಹಾಸನ ವೀಕ್ಷಣೆಗೆ 50ರೂ. ನಿಗದಿಪಡಿಸಲಾಗಿದೆ. ಟಿಕೆಟ್ ಖರೀದಿಸುವವರಿಗೆ ಕೆಂಪುಪಟ್ಟಿಯನ್ನು ಕಟ್ಟಲಾಗುತ್ತದೆ. ಇದನ್ನು ತೋರಿಸಿದರೆ ಮಾತ್ರ ಭದ್ರತಾ ಸಿಬ್ಬಂದಿ ದರ್ಬಾರ್ ಹಾಲ್‍ನಲ್ಲಿರುವ ಸಿಂಹಾಸನ ವೀಕ್ಷಣೆಗೆ ಅವಕಾಶ ಮಾಡಿಕೊಡುತ್ತಾರೆ.

ಕಳೆದ ಎರಡು ವರ್ಷಗಳಿಂದ ಸಿಂಹಾಸನವನ್ನು ವೀಕ್ಷಿಸಲು ರಾಜಮನೆತನದವರು ಸಾರ್ವಜನಿಕರಿಗೆ ಅವಕಾಶ ನೀಡಿರಲಿಲ್ಲ. ಕಳೆದ ವರ್ಷ ಅರಮನೆ ಆಡಳಿತ ಮಂಡಳಿ ನಿರ್ದೇಶಕಿ ಇಂದ್ರಮ್ಮ ಸಿಂಹಾಸನದ ಮೇಲೆ ಹೊದಿಸಿದ್ದ ಬಿಳಿ ಬಟ್ಟೆಯನ್ನು ತೆಗೆಯಲು ಹೋಗಿ ವಿವಾದ ಉಂಟಾಗಿತ್ತು. ಸೆ.15ರಂದು ಸಿಂಹಾಸನವನ್ನು ಜೋಡಣೆ ಮಾಡಿದ ನಂತರ ಅದನ್ನು ಬಿಳಿ ವಸ್ತ್ರದಿಂದ ಮುಚ್ಚಲಾಗಿರುತ್ತದೆ. ದಸರಾ ಆರಂಭದ ದಿನದಂದು ಛತ್ರಿ, ಕಳಶವನ್ನು ಜೋಡಣೆ ಮಾಡಿ ಪೂಜೆ ಸಲ್ಲಿಸಿ ಯದುವೀರ ಕೃಷ್ಣದತ್ತ ಒಡೆಯರ್ ಅವರು ಖಾಸಗಿ ದರ್ಬಾರ್ ನಡೆಸಿದ್ದು ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin