ಅರಮನೆ ಮುಂಭಾಗದಲ್ಲಿ ಧ್ವನಿ -ಬೆಳಕು ಕಾರ್ಯಕ್ರಮ ಸ್ಥಗಿತ
ಈ ಸುದ್ದಿಯನ್ನು ಶೇರ್ ಮಾಡಿ
ಮೈಸೂರು, ಫೆ.5-ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಅರಮನೆ ಮುಂಭಾಗದಲ್ಲಿ ನಾಳೆಯಿಂದ ಫೆ.10ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಂದೀಪ್ ತಿಳಿಸಿದ್ದಾರೆ.ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದ ನಿಮಿತ್ತ ನಾಳೆಯಿಂದ ಅರಮನೆ ಮುಂಭಾಗದಲ್ಲಿ ಸಂಜೆ 6 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಅರಮನೆ ಮುಂಭಾಗದಲ್ಲಿ ಫೆ.9ರಂದು 9ನೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments