ಅರಮನೆ ಮೈದಾನದಲ್ಲಿ ನಾಳೆ ಜೆಡಿಎಸ್ ಚುನಾವಣಾ ಪೂರ್ವ ಸಿದ್ಧತಾ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

jds

ಬೆಂಗಳೂರು, ಫೆ.9- ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ನಾಳೆ ಜೆಡಿಎಸ್‍ನ ಮಹತ್ವದ ಸಮಾವೇಶ ಅರಮನೆ ಮೈದಾನದಲ್ಲಿ ನಡೆಯಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದ್ದು, ವಿಧಾನಸಭಾ ಕ್ಷೇತ್ರವಾರು ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಯಲಿದೆ. ಚುನಾವಣಾ ಪೂರ್ವ ಸಿದ್ಧತಾ ಸಭೆ ಎಂದೇ ಬಣ್ಣಿಸಲಾಗಿರುವ ಈ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಗ್ರಾಮ ಪಂಚಾಯ್ತಿಯಿಂದ ಜಿಲ್ಲಾ, ತಾಲ್ಲೂಕು ಪಂಚಾಯ್ತಿ, ನಗರಸಭೆ, ಪುರಸಭೆಗಳ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಪಕ್ಷದ ಎಲ್ಲಾ ಹಂತದ ಮತ್ತು ವಿಭಾಗದ ಪದಾಧಿಕಾರಿಗಳು , ಶಾಸಕರು , ಸಂಸದರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಬೇಕೆಂಬ ಉದ್ದೇಶ ಹೊಂದಿರುವ ಜೆಡಿಎಸ್ ನಾಳೆ ನಡೆಯುವ ಸಭೆಯಲ್ಲಿ ಪ್ರತಿ ಜಿಲ್ಲಾವಾರು ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಅಲ್ಲದೆ ಮುಂದಿನ ಹೋರಾಟದ ರೂಪು ರೇಷೆಗಳನ್ನು ರೂಪಿಸಲಾಗುತ್ತದೆ.  ರಾಜ್ಯಾದ್ಯಂತ ಪಕ್ಷದ ಸಂಘಟನೆಗಾಗಿ ಹಾಗೂ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಉದ್ದೇಶದಿಂದ ಪಕ್ಷದ ಮುಖಂಡರು ಮತ್ತು ನಾಯಕರು ಕೈಗೊಳ್ಳಲಿರುವ ರಾಜ್ಯ ಪ್ರವಾಸದ ಬಗ್ಗೆಯೂ ಕೂಡ ತೀರ್ಮಾನಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin