ಅರವಿಂದ ಜಾದವ್ ಅವರನ್ನು ಪದಚ್ಯುತಿಗೊಳಿಸಿ : ಜಗದೀಶ್ ಶೆಟ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

S-Jagadish-Shettar

ಬೆಂಗಳೂರು,ಆ.24 -ಭೂಹಗರಣದಲ್ಲಿ ಸಿಲುಕಿರುವ ಅರವಿಂದ್ ಜಾದವ್ ಅವರನ್ನು ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಪದಚ್ಯುತಿಗೊಳಿಸಬೇಕೆಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.  ಅರವಿಂದ್ ಜಾದವ್ ಅವರು ಒಬ್ಬ ಜವಾಬ್ದಾರಿಯುತ ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ಭ್ರಷ್ಟಾಚಾರ ಎಸಗಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿಗಳ ಅಧಿಕಾರ ಅವಧಿಯನ್ನು ಸರ್ಕಾರ ವಿಸ್ತರಣೆ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಆರೋಪಿಸಿದ್ದಾರೆ.   ಆರ್ಡಿಪಿಆರ್ ಇಲಾಖೆಯಲ್ಲಿಯೂ ಅಧಿಕವಾದ ಭ್ರಷ್ಟಾಚಾರವಿದ್ದು , ಕರ್ನಾಟಕ ಲೋಕಸೇವಾ
ಆಯೋಗಕ್ಕೂ ಭ್ರಷ್ಟ ಅಧಿಕಾರಿಗಳನ್ನೇ ನೇಮಕ ಮಾಡಲಾಗಿದೆ. ಹಾಗಾಗಿ ಅರವಿಂದ್ ಜಾದವ್ ಪ್ರಕರಣವನ್ನು  ಸಿಬಿಐ ತನಿಖೆಗೆ ನೀಡಬೇಕೆಂದು ಶೆಟ್ಟರ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಎಲ್ಲಾ ಹಗರಣಗಳ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತಂದರೂ ಸಹ ಅಧಿಕಾರಿಗಳ ವಿರುದ್ಧ ಯಾವುದೇ ತನಿಖೆಗೆ ಕ್ರಮ ಕೈಗೊಳ್ಳದಿರುವುದು ಬೇಸರ ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin