ಅಶ್ವಿನ್ ಗುಣಗಾನ ನಾಯಕ ವಿರಾಟ್ ಕೊಹ್ಲಿ

ಈ ಸುದ್ದಿಯನ್ನು ಶೇರ್ ಮಾಡಿ

Ashwin

ಕಾನ್ಪುರ, ಸೆ.27- ಐತಿಹಾಸಿಕ 500ನೆ ಟೆಸ್ಟ್ ಪಂದ್ಯದಲ್ಲಿ ಅಮೋಘ ಬೌಲಿಂಗ್ ಪ್ರದರ್ಶನದಿಂದ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ರವಿಚಂದ್ರನ್ ಅಶ್ವಿನ್ ಸರ್ವಶ್ರೇಷ್ಠ ಆಟಗಾರ ಎಂದು ಭಾರತದ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗುಣಗಾನ ಮಾಡಿದ್ದಾರೆ. ನ್ಯೂಜಿಲೆಂಡ್-ಭಾರತ ನಡುವಿನ ಮೂರು ಟೆಸ್ಟ್ ಸರಣಿಗಳ ಮೊದಲ ಪಂದ್ಯದಲ್ಲಿ ಅಶ್ವಿನ್ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಮಿಂಚಿನ ಪ್ರದರ್ಶನ ನೀಡಿ ತಂಡವನ್ನು ಗೆಲ್ಲಿಸಿಕೊಟ್ಟರು ಎಂದರು. ಟೆಸ್ಟ್ ಪಂದ್ಯಗಳಲ್ಲಿ ಬ್ಯಾಟ್ಸ್‍ಮನ್‍ಗಳು ಪಂದ್ಯ ಗೆಲ್ಲಿಸಿಕೊಡುತ್ತಾರೆ ಎಂದು ಹಲವಾರು ಕ್ರಿಕೆಟಿಗರು ಹೇಳಿದ್ದಾರೆ. ಆದರೆ, ಬೌಲರ್‍ಗಳು ಕೂಡ ಟೆಸ್ಟ್ ಪಂದ್ಯಗಳನ್ನು ಗೆಲ್ಲಿಸಿಕೊಡಬಲ್ಲರು ಎಂದು ಕೊಹ್ಲಿ ಅಭಿಪ್ರಾಯಪಟ್ಟರು.

ತಂಡವು ಸಂಕಷ್ಟದಲ್ಲಿದ್ದಾಗ ಅಶ್ವಿನ್ ಪರಿಸ್ಥಿತಿಗೆ ತಕ್ಕಂತೆ ಆಡಬಲ್ಲ ಪರಿಣಿತ ಆಟಗಾರ. ಅಂತಹ ಆಟಗಾರರಿಗೆ ಬೆಲೆ ಕಟ್ಟಲಾಗದು ಎಂದು ಕೊಹ್ಲಿ ಹೊಗಳಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin