ಅಸ್ಸಾಂನಲ್ಲಿ ಉಲ್ಫಾ ಉಗ್ರರ ಅಟ್ಟಹಾಸ : ಮೂವರು ಯೋಧರು ಹುತಾತ್ಮ

ಈ ಸುದ್ದಿಯನ್ನು ಶೇರ್ ಮಾಡಿ

Assam

ಗುವಾಹತಿ, ನ.19-ಈಶಾನ್ಯ ಭಾರತದಲ್ಲಿ ಮತ್ತೆ ಉಗ್ರಗಾಮಿಗಳ ಉಪಟಳ ಹೆಚ್ಚಾಗಿದ್ದು, ಅಸ್ಸಾಂ ದಿಗ್‍ಬೊಯ್ ಪ್ರದೇಶದಲ್ಲಿ ಉಲ್ಫಾ ಉಗ್ರಗಾಮಿಗಳು ನಡೆಸಿದ ಬಾಂಬ್ ಸ್ಫೋಟ ಮತ್ತು ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ಇತರ ಮೂವರು ಗಾಯಗೊಂಡಿದ್ದಾರೆ.  ಯೋಧರು ಸೇನಾ ವಾಹನದಲ್ಲಿ ತೆರಳುತ್ತಿದ್ದಾಗ ಉಲ್ಪಾ ಉಗ್ರರು ಸುಧಾರಿತ ಸ್ಫೋಟಕ (ಐಇಡಿ) ಸ್ಫೋಟಿಸಿದರು. ಇದರ ಹಿಂದೆಯೇ ಯೋಧ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯಿತು ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಈ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ತೀವ್ರ ಗಾಯಗೊಂಡ ಇತರ ಮೂವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಇಡಿ ಮೂಲಕ ಬಾಂಬ್ ಸ್ಫೋಟಿಸಿ, ನಂತರ ಗುಂಡಿನ ಸುರಿಮಳೆಗೈದು ಪರಾರಿಯಾದ ಉಗ್ರರಿಗಾಗಿ ಈ ಪ್ರದೇಶದಲ್ಲಿ ತೀವ್ರ ಶೋಧ ಮುಂದುವರಿದಿದೆ.

► Follow us on –  Facebook / Twitter  / Google+

Facebook Comments

Sri Raghav

Admin