ಅ.1ಕ್ಕೆ ಅಂತಾರಾಷ್ಟ್ರೀಯ ಹಿರಿಯ ನಾಗರೀಕರ ದಿನಾಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

old--mans

ಚಿಕ್ಕಮಗಳೂರು,ಸೆ.30- ಅಂತಾರಾಷ್ಟ್ರೀಯ ಹಿರಿಯ ನಾಗರೀಕರ ದಿನಾಚರಣೆ ಹಾಗೂ ವಿಶ್ವ ಹೃದಯ ದಿನವನ್ನು ಅಕ್ಟೋಬರ್ 1ರಂದು ಸಂಜೆ 5 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು , ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಭಾವತಿ ಎಂ. ಹಿರೇಮಠ್ ಉದ್ಘಾಟಿಸಲಿದ್ದು ಜಿಲ್ಲಾಧಿಕಾರಿ ಜಿ. ಸತ್ಯವತಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್ ರಾಗಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಉಪನಿರ್ದೇಶಕ ಕೆ.ಸಿ ಬಸವರಾಜಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಲ್ಲಿಕಾರ್ಜುನಪ್ಪ, ವಕೀಲರ ಸಂಘದ ಅಧ್ಯಕ್ಷ ಹೆಚ್.ಹೆಚ್ ಕೃಷ್ಣಮೂರ್ತಿ, ಜಿಲ್ಲಾ ಹಿರಿಯ ನಾಗರೀಕರ ಒಕ್ಕೂಟದ ಅಧ್ಯಕ್ಷ ಕೆ.ಎಸ್ ನಂಜುಂಡರಾವ್, ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಆರ್ ಹೊನ್ನಶೆಟ್ಟಿ, ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಪಿ.ಎನ್ ನಾಗರಾಜ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ. ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿ ಡಾ. ಎಂ.ಹೆಚ್ ರವೀಂದ್ರನಾಥ ವಯೋವೃದ್ಧತೆ ಮತ್ತು ಆರೋಗ್ಯ ಸಮಸ್ಯೆಗಳು ಹಾಗೂ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯ ಫಿಜಿಶಿಯನ್ ಡಾ.ಮೊಹಮ್ಮದ್ ಸಾಲಿಹ ಹೃದಯದ ಆರೋಗ್ಯ ರಕ್ಷಣೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin