ಅ. 27ರಂದು ಅಪೋಲೋ ಆಸ್ಪತ್ರೆಯಿಂದ ಜಯಲಲಿತಾ ಡಿಸ್ಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

Jayalalitha-001

ಚೆನ್ನೈ,ಅ.19-ತಮಿಳುನಾಡು ಮುಖ್ಯಮಂತ್ರಿ ಮತ್ತು ಅಣ್ಣಾ ಡಿಎಂಕೆ ಅಧಿನಾಯಕಿ ಜಯಲಲಿತಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅ.27ರಂದು ಇಲ್ಲಿನ ಅಪೋಲೊ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಜಯಾ ಅವರ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅ.27ರಂದು ಅವರು ಆಸ್ಪತ್ರೆಯಿಂದ ಮನೆಗೆ ಹಿಂದಿರುಗಲಿದ್ದಾರೆ ಎಂದು ತಜ್ಞ ವೈದ್ಯರ ಹೇಳಿಕೆಯನ್ನು ಉಲ್ಲೇಖಿಸಿ ಮೂಲಗಳು ವರದಿ ಮಾಡಿವೆ.  ಕಳೆದ ಒಂದು ವಾರದಿಂದ ಅವರ ಆರೋಗ್ಯದ ಬಗ್ಗೆ ಯಾವುದೇ ನಿಖರ ಮಾಹಿತಿಗಳ ಲಭ್ಯವಿರಲಿಲ್ಲ. ಈಗ ಅವರು ಡಿಸ್ಚಾರ್ಜ್ ಆಗುವ ಸುದ್ದಿ ಸಚಿವರು, ಪಕ್ಷದ ಮುಖಂಡರು ಮತ್ತು ಅಸಂಖ್ಯಾತ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Facebook Comments

Sri Raghav

Admin