ಆಂಧ್ರದಲ್ಲಿ ಕೃಷ್ಣ ಪುಷ್ಕರ್ ಸಂಭ್ರಮ

ಈ ಸುದ್ದಿಯನ್ನು ಶೇರ್ ಮಾಡಿ

krishna-Pushkar

ಆಂಧ್ರಪ್ರದೇಶ,ಆ.12-  ಆಂಧ್ರಪ್ರದೇಶ, ತೆಲಂಗಾಣ ರಾಜ್ಯಾದ್ಯಂತ  ಇಂದು  ಕೃಷ್ಣ ಪುಷ್ಕರ್ ಸಂಭ್ರಮ ವಿಜೃಂಭಣೆಯಿಂದ ನಡೆಯಿತು.   ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು  ತಮ್ಮ ಕುಟುಂಬಸ್ಥರೊಂದಿಗೆ ದುರ್ಗಘಾಟ್‍ನಲ್ಲಿ ಪುಣ್ಯಸ್ನಾನ ಮಾಡಿ, ಪೂಜಾ ಕಾರ್ಯಗಳನ್ನು ನೆರವೇರಿಸಿದರು.    ಇತ್ತ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್, ಮೆಹಬೂಬು ನಗರದ ನದಿಯಲ್ಲಿ ಪುಣ್ಯ ಸ್ನಾನ ಮಾಡಿದರು.  ಕೃಷ್ಣನದಿ ಪುಷ್ಕರ ಹಿನ್ನಲೆಯಲ್ಲಿ ಎಲ್ಲೆಡೆ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿತ್ತು. ಭಕ್ತರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. 3500 ಪೊಲೀಸ್ ಸಿಬ್ಬಂದಿ ನಿಯೋಜನೆಗೊಂಡಿದ್ದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಳ್ಳಲಾಗಿತ್ತು.  ಅಮರಾವತಿ, ಶ್ರೀಶೈಲಂ ಸೇರಿದಂತೆ ಎಲ್ಲ ಕಡೆ ಭಕ್ತಾಧಿಗಳಲ್ಲಿ ಪುಷ್ಕರ್  ಆಚರಣೆಯ ಸಂಭ್ರಮ ಮನೆ ಮಾಡಿತ್ತು.

► Follow us on –  Facebook / Twitter  / Google+

 

 

Facebook Comments

Sri Raghav

Admin