ಆಂಧ್ರದಲ್ಲಿ ಮಳೆಯ ಆರ್ಭಟಕ್ಕೆ ಸತ್ತವರ ಸಂಖ್ಯೆ 14ಕ್ಕೆ ಏರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

andra

ಹೈದರಾಬಾದ್/ವಿಜಯಪುರ, ಸೆ.24- ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಆರ್ಭಟಕ್ಕೆ ಬಲಿಯಾದವರ ಸಂಖ್ಯೆ 14ಕ್ಕೇರಿದೆ. ಹೈದರಾಬಾದ್, ವಿಶಾಖಪಟ್ಟಣ, ಗುಂಟೂರುಗಳಲ್ಲಿ ಹೆಚ್ಚು ಸಾವು-ಸಾವು ಸಂಭವಿಸಿದೆ.  ಆಂಧ್ರ ಪ್ರದೇಶದ ರಾಜಧಾನಿ ಹೈದರಾಬಾದ್ ಮತ್ತು ಗುಂಟೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಅಕ್ಷರಶಃ ಜಲಪ್ರಳಯದಿಂದ ತತ್ತರಿಸಿವೆ. ಹೈದರಾಬಾದ್‍ನಲ್ಲಿ ನಿರಂತರ ಮಳೆಯಾಗುತ್ತಿದ್ದು, ರಸ್ತೆಗಳು ನದಿಗಳಾಗಿ ಮಾರ್ಪಟ್ಟಿವೆ. ಇನ್ನೊಂದೆಡೆ ಗುಂಟೂರು ಜಿಲ್ಲೆಯ ಕೆ.ಎಲ್.ರಾವ್ ಸಾಗರ ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭರ್ತಿಯಾಗಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ಈ ಎರಡೂ ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಐದು ಎನ್‍ಡಿಆರ್‍ಎಫ್ ತಂಡಗಳನ್ನು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.
ಈ ಎರಡೂ ಜಿಲ್ಲೆಗಳ ಬಹುಭಾಗಗಳಲ್ಲಿ ವ್ಯಾಪಕ ಮಳೆಯಿಂದ ರೈಲು ಮತ್ತು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ತಗ್ಗು ಪ್ರದೇಶದಲ್ಲಿನ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.

ಮುಂಬೈ ವರದಿ: ಮುಂಬೈನಲ್ಲೂ ಮಳೆಯ ಆರ್ಭಟ ಮುಂದುವರಿದಿದ್ದು, ಅಳುಂದ್‍ನಲ್ಲಿ ಗೋಡೆ ಕುಸಿದು ವ್ಯಕ್ತಿಯೊಬ್ಬ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin