ಆಂಬಿಡೆಂಟ್ ಪ್ರಕರಣ ಸಿಐಡಿಗೆ ವರ್ಗಾವಣೆ ಇಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Parameshwar
ಬೆಂಗಳೂರು, ನ.16- ಆಂಬಿಡೆಂಟ್ ವಂಚನೆ ಪ್ರಕರಣವನ್ನು ಸಿಸಿಬಿಯಿಂದ ಸಿಐಡಿಗೆ ವರ್ಗಾವಣೆ ಮಾಡುವ ಪ್ರಮೇಯವೇ ಇಲ್ಲ ಎಂದು ಗೃಹ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು.  ಹುಡ್ಕೋ ಸಂಸ್ಥೆಗೆ ಅಡಮಾನವಿಟ್ಟ ರಾಜಾಜಿನಗರ ವಾಣಿಜ್ಯ ಸಂಕೀರ್ಣ ಹಾಗೂ ಕಸಾಯಿಖಾನೆಯನ್ನು ಋಣಮುಕ್ತಗೊಳಿಸುವ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಸಿಸಿಬಿ ಅಧಿಕಾರಿಗಳೇ ಪ್ರಕರಣವನ್ನು ಸಮರ್ಪಕವಾಗಿ ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ಸಿಐಡಿಗೆ ಪ್ರಕರಣ ವರ್ಗಾವಣೆ ಮಾಡುವ ಚಿಂತನೆ ಸರ್ಕಾರಕ್ಕೆ ಇಲ್ಲ ಎಂದು ಹೇಳಿದರು. ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ಅಧಿಕಾರಿಗಳು ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

Facebook Comments