ಆಕ್ಷೇಪ ಅರ್ಜಿಗಳ ಸಿಂಧುತ್ವದ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಮುಂದಿನ ವಾರ ಮಹತ್ವದ ತೀರ್ಪು

ಈ ಸುದ್ದಿಯನ್ನು ಶೇರ್ ಮಾಡಿ

Supreme

ನವದೆಹಲಿ, ನ.18-ಕಾವೇರಿ ವಿವಾದದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಂದಿನ ವಾರ ಮಹತ್ವದ ತೀರ್ಪು ಪ್ರಕಟಿಸಲಿದೆ. ಕಾವೇರಿ ನ್ಯಾಯಾಧಿಕರಣದ ಐತೀರ್ಪನ್ನು ಪ್ರಶ್ನಿಸಿ ಎಲ್ಲ ನಾಲ್ಕು ರಾಜ್ಯಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುವ ಅಧಿಕಾರವು ಸರ್ವೋಚ್ಚ ನ್ಯಾಯಾಲಯಕ್ಕೆ ಇದೆಯೇ ಅಥವಾ ಇಲ್ಲವೇ ಎಂಬ ತೀರ್ಪನ್ನು ಮುಂದಿನ ವಾರ ಪ್ರಕಟಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಇದರೊಂದಿಗೆ ಅರ್ಜಿಗಳ ಸಿಂಧುತ್ವದ ಬಗ್ಗೆ ನಿರ್ಣಾಯಕ ಆದೇಶ ಹೊರ ಬೀಳಲಿದೆ. ಕೃಷ್ಣಾ ನದಿ ನೀರು ಮರುಹಂಚಿಕೆ ಅರ್ಜಿ ವಿಚಾರಣೆ ವೇಳೆ ನಿನ್ನೆ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಅವರಿಗೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಈ ವಿಷಯ ತಿಳಿಸಿದರು.

ಈ ಅರ್ಜಿಗಳ ವಿಷಯದ ಬಗ್ಗೆ ಮುಂದಿನ ವಾರ ಸುಪ್ರೀಂಕೋರ್ಟ್ ತನ್ನ ತೀರ್ಪು ಪ್ರಕಟಿಸುವುದಾಗಿ ಅವರು ಹೇಳಿದರು ಕಾವೇರಿ ನ್ಯಾಯಾಧಿಕರಣದ ಐತೀರ್ಪನ್ನು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಅರ್ಜಿ ಸಲ್ಲಿಸಿದ್ದವು. ಇದರ ವಿಚಾರಣೆ ನಡೆಸುವ ಅಧಿಕಾರ ಸುಪ್ರೀಂಕೋರ್ಟ್‍ಗೆ ಇಲ್ಲ ಎಂದು ಕೇಂದ್ರ ಸರ್ಕಾರ ಮತ್ತು ಪಾಂಡಿಚೇರಿ ಪ್ರತಿಪಾದಿಸಿದ್ದವು. ಹೀಗಾಗಿ ಈ ಅರ್ಜಿಗಳ ಸಿಂಧುತ್ವದ ಬಗ್ಗೆ ಪ್ರಶ್ನೆ ಉದ್ಭವಿಸಿದ್ದು, ಈ ಕುರಿತು ಈಗಾಗಲೇ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ತೀರ್ಪು ಕಾದಿರಿಸಿದೆ. ಸುಪ್ರೀಂಕೋರ್ಟ್‍ನಿಂದ ಮುಂದಿನ ವಾರ ಹೊರಬೀಳುವ ತೀರ್ಪಿನತ್ತ ಇದೀಗ ಎಲ್ಲರ ಕಣ್ಣು ನೆಟ್ಟಿದೆ.

ಸಂಸತ್ತಿನಲ್ಲಿ ಕಾವೇರಿ ಧ್ವನಿ : ಈ ನಡುವೆ ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಎಐಎಡಿಎಂಕೆ ಸದಸ್ಯರು ನಿನ್ನೆ ಕಾವೇರಿ ನೀರಿಗಾಗಿ ಧ್ವನಿ ಎತ್ತಿದರು.  ಚಳಿಗಾಲದ ಸಂಸತ್ತಿನ ಉಭಯ ಸದನಗಳ ಕಲಾಪಗಳು ಆರಂಭವಾಗುತ್ತಿದ್ದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಆಗಲೇಬೇಕು. ತಮಿಳುನಾಡಿಗೆ ಸೂಕ್ತ ಪ್ರಮಾಣದಲ್ಲಿ ಕಾವೇರಿ ನೀರು ದೊರೆಯಬೇಕು ಎಂದು ಅಣ್ಣಾ ಡಿಎಂಕೆ ಸಂಸದರು ಆಗ್ರಹಿಸಿದರು. ಆದರೆ ನೋಟು ರದ್ದತಿಯು ಪ್ರಮುಖ ವಿಷಯವಾಗಿ ಪ್ರಸ್ತಾಪವಾದ ಕಾರಣ ಈ ವಿಚಾರ ಮಹತ್ವದ ಪಡೆದುಕೊಳ್ಳಲಿಲ್ಲ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin