ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿ ಸಮಯಪ್ರಜ್ಞೆ ಮೆರೆದ ಸ್ಥಳೀಯರು..!

ಈ ಸುದ್ದಿಯನ್ನು ಶೇರ್ ಮಾಡಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಡ್ಯ, ಮೇ 24- ಮಹಿಳೆಯೊಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಪ್ಪಿಸಿದ ಸ್ಥಳೀಯರು ಪೊಲೀಸರ ಸಹಾಯದೊಂದಿಗೆ ಮನವೊಲಿಸಿ ಪೋಷಕರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣದ ಕಾವೇರಿ ನದಿ ಉತ್ತರ ಭಾಗದ ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತಿರುವ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ವರ್ತನೆಯಿಂದ ಅನುಮಾನಗೊಂಡು ಆಕೆ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ.
ಚನ್ನಪಟ್ಟಣ ವಾಸಿ ಅಶ್ವಿನಿ (25) ತನ್ನ ಇಬ್ಬರು ಮಕ್ಕಳೊಂದಿಗೆ ಬಂದು ಸೇತುವೆ ಮೇಲೆ ನಿಂತು ನದಿಗೆ ಹಾರಲು ಪ್ರಯತ್ನಿಸುತ್ತಿದ್ದುದನ್ನು ಸ್ಥಳೀಯ ಆಟೋ ಚಾಲಕರು ಗಮನಿಸಿ ಬಳಿಗೆ ಹೋಗಿ ವಿಚಾರಿಸಿದಾಗ ವಿಷಯ ತಿಳಿದುಬಂದಿದೆ. ಕೂಡಲೇ ಶ್ರೀರಂಗಪಟ್ಟಣ ಠಾಣೆಗೆ ಕರೆದೊಯ್ದು ಪೊಲೀಸರ ಸಹಕಾರದಿಂದ ಆಕೆಯ ಮನವೊಲಿಸಿ ಪೋಷಕರನ್ನು ಕರೆಸಿ ಕಳುಹಿಸಿಕೊಟ್ಟಿದ್ದಾರೆ.

Facebook Comments

Sri Raghav

Admin