ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

woman--suicide

ಚನ್ನಪಟ್ಟಣ, ಸೆ.3- ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ಜೊತೆ ಹೋರಾಟ ನಡೆಸುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.ಸಾವನ್ನಪ್ಪಿರುವ ಯುವತಿ ತಮನ್ನಾ (18) ನಗರದ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಜೀವನ್‍ಪುರದವಳೆಂದು ಈಕೆ ಬುಧವಾರ ಕೌಟುಂಬಿಕ ಕಲಹದಿಂದ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು.  ಶೇ.85ರಷ್ಟು ಸುಟ್ಟ ಗಾಯಗಳಿಂದ ಸಾವು ಬದುಕಿನ ಜೊತೆ ಹೋರಾಟ ನಡೆಸುತ್ತಿದ್ದ ಆಕೆಯನ್ನು ತಕ್ಷಣ ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಆಕೆಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ 24 ತಾಸುಗಳು ಜೀವನ್ಮರಣ ಹೋರಾಟ ನಡೆಸಿದ್ದ ಆಕೆ, ಗುರುವಾರ ಮುಂಜಾನೆ ಸಾವನ್ನಪ್ಪಿದ್ದಾಳೆ.ಈ ಪ್ರಕರಣದ ಬಗ್ಗೆ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆಸ್ಪತ್ರೆಯಲ್ಲಿ ಪೂರ್ವ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ. 3ದಿನದಲ್ಲಿ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇದು ಎರಡನೇ ಪ್ರಕರಣವಾಗಿದ್ದು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅವಿವಾಹಿತ ಯುವತಿಯರೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

► Follow us on –  Facebook / Twitter  / Google+

 

 

 

 

Facebook Comments

Sri Raghav

Admin