ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಸಾಂತ್ವನ ಪತ್ರ ಬರೆಯಲು ಮುಂದಾದ ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa-BJP

ಬೆಂಗಳೂರು,ಫೆ.22- ಆತ್ಮಹತ್ಯೆಗೆ ಶರಣಾದ ರೈತರಿಗೆ ಒಂದು ಲಕ್ಷ ಪರಿಹಾರ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಘೋಷಿಸಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಸಾಂತ್ವನ ಪತ್ರ ಬರೆಯಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಸರಿಸುಮಾರು 4 ಸಾವಿರ ಮಂದಿ ರೈತರು ವಿವಿಧ ಸಮಸ್ಯೆಗಳಿಂದ ಕಳೆದ ಐದು ವರ್ಷಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲವರು ಗ್ರಾಮ ವಾಸ್ತವ್ಯದ ಬಗ್ಗೆ ಮಾತನಾಡಿದರೆ, ಮತ್ತೆ ಕೆಲವರು ರೈತ ಸ್ನೇಹಿ ಪಕ್ಷ ಎಂದು ತಮ್ಮನ್ನು ಬಿಂಬಿಸಿಕೊಳ್ಳುವ ಎಲ್ಲಾ ವಿಧದ ಪ್ರಯತ್ನ ಮಾಡುತ್ತಿದ್ದಾರೆ.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ 3,500ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಖುದ್ದು ಪತ್ರ ಬರೆದು ಸಾಂತ್ವನ ಹೇಳಲಿದ್ದಾರೆ. ಈ ಮೂಲಕ ರೈತ ಸಮುದಾಯವನ್ನು ಬಿಜೆಪಿಯತ್ತ ಸೆಳೆಯಲು ಯತ್ನಿಸಿದ್ದಾರೆ. ಈಗಾಗಲೇ ಪತ್ರರವಾನೆ ಪ್ರಕ್ರಿಯೆ ಆರಂಭವಾಗಿದೆ ಎನ್ನಲಾಗುತ್ತಿದೆ.  ಮಾಹಿತಿ ಪ್ರಕಾರ ಪತ್ರದಲ್ಲಿ ಬಿಎಸ್‍ವೈ, ರೈತಕುಟುಂಬದ ನನ್ನ ಬಂಧುಗಳಿಗೆ, ನೋವಿನಿಂದ ಈ ಪತ್ರ ಬರೆಯುತ್ತಿದ್ದೇನೆ. ದುಡಿಯುವ ಕೈಗಳನ್ನು ಕಳೆದುಕೊಂಡ ದುಃಖದಲ್ಲಿ ನೀವಿದ್ದೀರಿ. ಧೈರ್ಯದಿಂದ ಬದುಕಬೇಕಾದ ರೈತನೇ ಆತ್ಮಹತ್ಯೆಯ ದಾರಿ ತುಳಿದಿರುವುದು ದುಃಖತಂದಿದೆ. ಈ ಬಾರಿ ಅಧಿಕಾರಕ್ಕೆ ಬಂದರೆ, ಆತ್ಮಹತ್ಯೆ ಮಾಡಿಕೊಂಡ ಎಲ್ಲ ರೈತ ಕುಟುಂಬಗಳಿಗೆ ಪರಿಹಾರ ನೀಡುವ ಸಂಕಲ್ಪ ಮಾಡಿದ್ದೇನೆ. ಯಾವೊಬ್ಬ ರೈತನೂ ಆತ್ಮಹತ್ಯೆ ದಾರಿ ಹಿಡಿಯಬಾರದು. ರೈತನ ಮುಖದಲ್ಲಿ ನಗು ತರಲು ನನ್ನ ರಾಜಕೀಯ ಜೀವನವನ್ನು ಮುಡಿಪಾಗಿಡುತ್ತೇನೆ ಎಂಬ ಮಾಹಿತಿ ಇದೆ ಎನ್ನಲಾಗಿದೆ.

Facebook Comments

Sri Raghav

Admin