ಆತ್ಮಹತ್ಯೆ ಯತ್ನಯತಿನಿಸಿದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ವೃದ್ಧ
ಕಲಘಟಗಿ,ಆ27- ಐದು ವರ್ಷದ ಹಸುಳೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ವೃದ್ಧನೋರ್ವ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಗುಂಡೂರ (60) ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಘಟನೆ ವಿವರ: ಆರೋಪಿ ಬಸಪ್ಪ ಬಾಲಕಿಯೋರ್ವಳನ್ನು ಆ17ರಂದು ಫುಸಲಾಯಿಸಿ ಮನೆಯ ಪಕ್ಕದ ಗೋವಿನ ಜೋಳದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ವೆಸಗಿ ನಾಪತ್ತೆಯಾಗಿದ್ದ. ಈ ಬಗ್ಗೆ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಗಾಬರಿಯಾಗಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅತ್ಯಾಚಾರಕೊಳ್ಳಗಾದ ಬಾಲಕಿ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಜಿಲ್ಲಾ ಪೋಲಿಸ್ ವರಿಷ್ಠಾಕಾರಿ ಧಮೇಂದ್ರಕುಮಾರ ಮೀನಾ ಹಾಗೂ ಡಿ ವೈ ಎಸ್ ಬಿ ಪಿ ಚಂದ್ರಶೇಖರ ಘಟನಾ ಸ್ಥಳಕ್ಕೆ ಭೈಟಿ ನೀಡಿ ಪರಿಶೀಲನೆ ನಡೆಸಿದರು. ಪೊಸ್ಕೊ ಕಾಯ್ದೆ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
► Follow us on – Facebook / Twitter / Google+