ಆದಿಚುಂಚನಗಿರಿ ಕಾಲಭೈರವೇಶ್ವರನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ದೇವೇಗೌಡ ದಂಪತಿ
ಈ ಸುದ್ದಿಯನ್ನು ಶೇರ್ ಮಾಡಿ
ಆದಿ ಚುಂಚನಗಿರಿ, ಡಿ.29- ವರ್ಷದ ಕಡೆ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಪತ್ನಿ ಚನ್ನಮ್ಮ ದೇವೇಗೌಡರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ ಕಾಲಭೈರವೇಶ್ವರನ ಸನ್ನಿಧಿಯಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ ದೇವೇಗೌಡ ದಂಪತಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದರು. ನಂತರ ಅವರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಅಮಾವಾಸ್ಯೆ ಅಂಗವಾಗಿ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ಏರ್ಪಡಿಸಲಾಗಿತ್ತು.ಈ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಲ್ಲಿ ದೇವೇಗೌಡರು ಪಾಲ್ಗೊಂಡಿದ್ದರು.
Eesanje News 24/7 ನ್ಯೂಸ್ ಆ್ಯಪ್ – Click Here to Download
Facebook Comments