ಆದಿಚುಂಚನಗಿರಿ ಶ್ರೀಗಳ ಜೊತೆ ಅಮಿತ್ ಷಾ ರಹಸ್ಯ ಮಾತುಕತೆ

ಈ ಸುದ್ದಿಯನ್ನು ಶೇರ್ ಮಾಡಿ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು, ಮೇ 10-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಇಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದರು. ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ವಿಜಯನಗರದಲ್ಲಿರುವ ಅಮಿತ್ ಷಾ ಅವರು ಒಬ್ಬರೇ ತೆರಳಿ, ಮೊದಲು ಶ್ರೀಗಳ ಆಶೀರ್ವಾದ ಪಡೆದರು. ನಂತರ ಶ್ರೀಗಳು ಹಾಗೂ ಅಮಿತ್ ಷಾ ಸುಮಾರು 10 ನಿಮಿಷಕ್ಕೂ ಹೆಚ್ಚು ಕಾಲ ರಹಸ್ಯವಾಗಿ ಮಾತುಕತೆ ನಡೆಸಿದರು. ಮಠಕ್ಕೆ ಭೇಟಿ ನೀಡಿದ ವೇಳೆ ಯಾರೊಬ್ಬರನ್ನು ಷಾ ಕರೆದೊಯ್ದಿರಲಿಲ್ಲ.  ಈ ಹಿಂದೆಯೂ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

Facebook Comments

Sri Raghav

Admin