ಆಧಾರ್ ಸಂಖ್ಯೆ ನೀಡದಿದ್ದರೆ ಪಿಂಚಣಿ ಸ್ಥಗಿತ

ಈ ಸುದ್ದಿಯನ್ನು ಶೇರ್ ಮಾಡಿ

Aadhar

ಕೆ.ಆರ್.ಪೇಟೆ,ನ.23- ತಾಲೂಕಿನಲ್ಲಿ ವಿವಿಧ ಬಗೆಯ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ತಕ್ಷಣ ತಮ್ಮ ಆಧಾರ್ ಸಂಖ್ಯೆಯನ್ನು ನೀಡಬೇಕು ಇಲ್ಲದಿದ್ದರೆ ತಮ್ಮ ಪಿಂಚಣಿ ನಿಂತು ಹೋಗಲಿದೆ ಎಂದು ತಹಸೀಲ್ದಾರ್ ಕೆ.ರತ್ನಾ ಹೇಳಿದರು. ತಾಲೂಕಿನ ನಾಡಬೋಗನಹಳ್ಳಿ ಗ್ರಾಮದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ಹಮ್ಮಿಕೊಂಡಿದ್ದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಗ್ರಾಮದ ಹಲವು ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡುತ್ತಿದ್ದರು.

ಅರ್ಹ ಫಲಾನುಭವಿಗಳು ಪಿಂಚಣಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದರೆ ನಿಗದಿತ ಅವಧಿಯೊಳಗೆ ಆದೇಶ ಪತ್ರಗಳನ್ನು ತಮ್ಮ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಯಾವುದೇ ಪಿಂಚಣಿಗೆ ಪಡೆದುಕೊಳ್ಳಲು ಯಾವುದೇ ಮಧ್ಯವರ್ತಿಗಳನ್ನು ಅವಲಂಭಿಸಬೇಡಿ ನೇರವಾಗಿ ನಾಡಕಚೇರಿ ಅಥವಾ ತಾಲೂಕು ಕಚೇರಿಯಲ್ಲಿ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು ಎಂದು ಮನವಿ ಮಾಡಿದರು.  ಮಹಿಳೆ ಸಬಲೀಕರಣ ಕುರಿತು ಪ್ರಧಾನ ಉಪನ್ಯಾಸ ನೀಡಿದ ಸ.ಪ.ಪೂ.ಕಾಲೇಜು ಉಪನ್ಯಾಸಕ ಲಿಂಗಣ್ಣಸ್ವಾಮಿ, ಮಾತನಾಡಿ ಮಹಿಳೆಯು ಸಬಲೀಕರಣಗೊಂಡಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಯಾವ ದೇಶ ಅಭಿವೃದ್ಧಿ ಸಾಧಿಸಿದೆ ಎಂದು ತಿಳಿದು ಬಂದರೆ ಆ ದೇಶದಲ್ಲಿ ಮಹಿಳೆಯರು ಸಬಲೀಕರಣರಾಗಿದ್ದಾರೆ ಎಂದರ್ಥ ಎಂದರು.

ಶೀಳನೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ವಾಸುದೇವ್, ರಾಜಸ್ವ ನಿರೀಕ್ಷಕ ರಾಮಚಂದ್ರು, ಗ್ರಾಮ ಲೆಕ್ಕಾಧಿಕಾರಿ ಸುಧಾಕರ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಕೆ.ಎಸ್.ಚಂದ್ರು, ತಾಲೂಕು ಪದವೀಧರರ ಜಾಗೃತಿ ವೇದಿಕೆಯ ಸಂಚಾಲಕ ಶ್ರೀನಿವಾಸ್.ಆರ್.ಸಜ್ಜನ್, ಎನ್.ಎಸ್.ಎಸ್.ಅಧಿಕಾರಿ ಎಸ್.ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸ್ವಯಂ ಸೇವಕರು ಮಧ್ಯಪಾನ ಚಟವೊಂದಿದ ಕುಟುಂಬದ ಸಮಸ್ಯೆಯನ್ನು ಬಿಂಬಿಸುವ ಸಾಮಾಜಿಕ ನಾಟಕ ಪ್ರದರ್ಶನ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin