ಆಯ್ಕೆ ಪಟ್ಟಿ ಶೀಘ್ರ ಬಿಡುಗಡೆಗೆ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

karnataka

ಬೆಂಗಳೂರು,ಅ.7- ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2015ರ ಜನವರಿಯಲ್ಲಿ 2160 ಸಹಾಯಕ ಪ್ರಾಧ್ಯಾಪಕರ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು.ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕೂಡ ನಡೆಸಿತ್ತು.ಅಲ್ಲದೆ, ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಎರಡೂವರೆ ತಿಂಗಳು ಆಗಿದ್ದರೂ ಆಯ್ಕೆ ಪಟ್ಟಿಯನ್ನು ಏಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹೋರಾಟ ಸಮಿತಿ ಅಧ್ಯಕ್ಷ ಯೋಗೇಶ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಕೆಇಎ ಅಧಿಸೂಚನೆ ಹೊರಡಿಸಿದ್ದ ನಂತರ ಪರೀಕ್ಷೆ ನಡೆಸಲು 13 ತಿಂಗಳು ವಿಳಂಬವಾಗಿತ್ತು. ಪರೀಕ್ಷೆ ಮುಗಿದರೂ  ಕೀ ಉತ್ತರದೊಂದಿಗೆ ಮೆರಿಟ್ ಪಟ್ಟಿಯನ್ನು ಪ್ರಕಟಿಸಲು ಸುಮಾರು ನೂರು ದಿನಗಳ ಕಾಲಾವಕಾಶ ತೆಗೆದುಕೊಂಡಿತ್ತು. ಅಲ್ಲದೆ, ಅನಾವಶ್ಯಕವಾಗಿ ಎರಡು ಬಾರಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಸಿತ್ತು.ಸುಮಾರು 20 ತಿಂಗಳುಗಳಿಂದ ಉದ್ಯೋಗಕ್ಕಾಗಿ ಕಾಯುತ್ತಿರುವ ಅರ್ಹ ಅಭ್ಯರ್ಥಿಯ ಸ್ಥಿತಿ ಶೋಚನೀಯವಾಗಿದ್ದು, ಕೆಲವು ಅಭ್ಯರ್ಥಿಗಳು ಅಧಿಸೂಚನೆ ಹೊರಡಿಸಿದ್ದಂದಿನಿಂದಲೂ ಇರುವ ಹುದ್ದೆಯನ್ನು ಬಿಟ್ಟು ಸರ್ಕಾರಿ ಹುದ್ದೆಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಇದಲ್ಲದೆ, ಅಭ್ಯಥಿಗಳು ಅರ್ಥಿಕವಾಗಿ ನಷ್ಟ ಅನುಭವಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವು ಈ ಬಗ್ಗೆ ಕೂಡಲೇ ಗಮನಹರಿಸಿ ಸಮಸ್ಯೆಯನ್ನು ತಕ್ಷಣ ಬಗೆಹರಿಸಿಬೇಕು. ಶೀಘ್ರದಲ್ಲೇ ಆಯ್ಕೆ ಪಟ್ಟಿ ಬಿಡುಗಡೆ ಮಾಡಿ ನೇಮಕಾತಿ ಆದೇಶ ನೀಡಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 

 

► Follow us on –  Facebook / Twitter  / Google+

Facebook Comments

Sri Raghav

Admin