ಆರ್‍ಆರ್‍ನಗರ ಕ್ಷೇತ್ರದ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸಿ

ಈ ಸುದ್ದಿಯನ್ನು ಶೇರ್ ಮಾಡಿ

RR-Nagare-c-v

ಬೆಂಗಳೂರು, ಜೂ.29- ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಕಾಮಗಾರಿಗಳಲ್ಲಿ ಭಾರೀ ಅಕ್ರಮಗಳು ನಡೆದಿದ್ದು, ಸಿಬಿಐ ತನಿಖೆಗೆ ವಹಿಸಬೇಕೆಂದು ಪಾಲಿಕೆ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಆಗ್ರಹಿಸಿದರು.  ಬಿಬಿಎಂಪಿ ಸಭೆಯಲ್ಲಿಂದು ಮೇಯರ್ ಧೋರಣೆ ವಿರೋಧಿಸಿ ಕಚೇರಿ ಮುಂದೆ ಬಿಜೆಪಿ ಸದಸ್ಯರೊಂದಿಗೆ ಪ್ರತಿಭಟನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ, ಅವ್ಯವಹಾರಗಳು ಸಾಕಷ್ಟು ನಡೆದಿದ್ದು, ಈ ಬಗ್ಗೆ ಮೇಯರ್ ಅವರ ಗಮನಕ್ಕೆ ತರಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಈ ಕುರಿತು ಕಳೆದ ಎರಡು ಮಾಸಿಕ ಸಭೆಗಳಲ್ಲೂ ಕೂಡ ಪ್ರಸ್ತಾಪಿಸಿ ಪ್ರತಿಭಟನೆ ನಡೆಸಲಾಗಿದೆ. ಆ ಕ್ಷೇತ್ರದ ಮೂವರು ಸದಸ್ಯರು, ಅಲ್ಲದೆ ಅವರದೇ ಪಕ್ಷದ ಸದಸ್ಯರು ಆರೋಪಿಸಿದ್ದಾರೆ. ಅಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಮೇಯರ್ ಜಿ.ಪದ್ಮಾವತಿ ಅವರು ಆರ್‍ಆರ್‍ನಗರ ಕ್ಷೇತ್ರದ ಶಾಸಕರ ತಾಳಕ್ಕೆ ತಕ್ಕಂತೆ ವರ್ತಿಸುತ್ತಿದ್ದಾರೆ. ಇದೇ ಧೋರಣೆಯನ್ನು ಮುಂದುವರೆಸಿದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin