ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ : ಹಲವರು ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Rudresh-03

ಬೆಂಗಳೂರು,ಅ.17-ನಿನ್ನೆ ಶಿವಾಜಿನಗರದಲ್ಲಿ ನಡೆದ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿದೆ. ಈ ಸಂಬಂಧ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಹೇಳಿದರು.  ಪೊಲೀಸರು ಆರ್‍ಎಸ್‍ಎಸ್ ಕಾರ್ಯಕರ್ತರ, ಕಾಂಗ್ರೆಸ್ ಕಾರ್ಯಕರ್ತ ಎಂದು ತನಿಖೆ ನಡೆಸುವುದಿಲ್ಲ. ಒಬ್ಬ ವ್ಯಕ್ತಿ ಹಾಡುಹಗಲೇ ಕೊಲೆಯಾಗಿದ್ದಾನೆ. ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಾರೆ, ಶೀಘ್ರ ಆರೋಪಿಗಳನ್ನು ಬಂಧಿಸುತ್ತಾರೆ ಎಂದು ಹೇಳಿದರು. ತನಿಖೆ ನಡೆಯುತ್ತಿದ್ದು ಐದಾರು ತಂಡಗಳನ್ನು ರಚನೆ ಮಾಡಲಾಗುತ್ತಿದೆ. ಬಿಜೆಪಿ ಆರ್‍ಎಸ್‍ಎಸ್‍ನವರು ಅವರ ಕಾರ್ಯಕರ್ತರ ಕೊಲೆಯಾಗಿರುವುದಕ್ಕೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ನಾವು ವಿರೋಧಿಸುವುದಿಲ್ಲ. ಶೀಘ್ರವೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin