ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಹಂತಕರ ಬಂಧನ , ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

Rudresh-Murderer

ಬೆಂಗಳೂರು, ಅ.27– ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣವನ್ನು ಭೇದಿಸಿರುವ ಪೂರ್ವ ವಿಭಾಗದ ಪೊಲೀಸರು ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖಾ ತಂಡಗಳು ಖಚಿತ ಮಾಹಿತಿ ಮೇರೆಗೆ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸುತ್ತಿವೆ.
ರುದ್ರೇಶ್ ಕೊಲೆ ವೈಯಕ್ತಿಕ ದ್ವೇಷ ಮತ್ತು ಇನ್ನಿತರೆ ಕಾರಣಗಳಿಂದ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಇನ್ನೂ ಕೆಲವು ಸಾಕ್ಷ್ಯಾಧಾರಗಳಿಗಾಗಿ ತನಿಖಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ತನಿಖೆ ಪೂರ್ಣಗೊಳಿಸಿದ ನಂತರ ಆರೋಪಿಗಳನ್ನು ಬಂಧಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.

ಕಳೆದ 16ರಂದು ಬೆಳಗ್ಗೆ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಆರ್‍ಎಸ್‍ಎಸ್ ಪಥ ಸಂಚಲನದಲ್ಲಿ ಪಾಲ್ಗೊಂಡು ನಂತರ ಮನೆಗೆ ತೆರಳಿದ್ದರು. ಈ ವೇಳೆ ಅವರಿಗೆ ದೂರವಾಣಿ ಕರೆಯೊಂದು ಬಂದಿದ್ದು, ಅದರಂತೆ ಅವರು ಕಾಮರಾಜ ರಸ್ತೆಯಲ್ಲಿನ ಹೊಟೇಲ್ ಬಳಿ ಬಂದು ಸ್ನೇಹಿತರ ಜತೆ ಮಾತನಾಡುತ್ತಿದ್ದರು.  ಆಗ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಲ್ಲಿ ಒಬ್ಬ ರುದ್ರೇಶ್ ಅವರ ಕುತ್ತಿಗೆಗೆ ಲಾಂಗ್‍ನಿಂದ ಬಲವಾಗಿ ಹೊಡೆದು ಕ್ಷಣಾರ್ಧದಲ್ಲಿ ಮಾಯವಾಗಿದ್ದರು. ಹಲ್ಲೆಯಿಂದ ಕುಸಿದು ಬಿದ್ದ ರುದ್ರೇಶ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸಾವನ್ನಪ್ಪಿದ್ದರು.
ಈ ಭೀಕರ ಕೊಲೆಯಿಂದ ಪೂರ್ವ ವಿಭಾಗದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದರು. ಆರೋಪಿಗಳ ಬಂಧನಕ್ಕೆ ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಕಮಿಷನರ್ ಹರಿಶೇಖರನ್ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನುರಚಿಸಲಾಗಿತು. ವಿಶೇಷ ತಂಡಗಳಿಗೆ ಸಿಸಿಬಿಯ ತಾಂತ್ರಿಕ ವಿಭಾಗ ನೆರವು ನೀಡಿತ್ತು.

ಆರೋಪಿಗಳೆಲ್ಲ SDPI ಸದಸ್ಯರು

ರುದ್ರೇಶ್ ಕೊಲೆ ಆರೋಪಿಗಳೆಲ್ಲ SDPI(ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಎಂಬ ರಾಜಕೀಯ ಪಕ್ಷದ ಸದಸ್ಯರು. SDPI ಕೇರಳದಲ್ಲಿ ಪ್ರಭಾವಿ ಪ್ರಾದೇಶಿಕ ಪಕ್ಷವಾಗಿದ್ದು, ಮಂಗಳೂರು,ಬೆಂಗಳೂರು, ಮೈಸೂರು, ಮಡಿಕೇರಿಯಲ್ಲೂ ಪಕ್ಷದ ಘಟಕಗಳಿವೆ. ಬೆಂಗಳೂರು(ಅ.27): ಅಂತೂ ಇಂತೂ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನವೀದ್, ನಜೀರ್ ಮತ್ತು ಮಜರ್ ಬಂಧಿತ ಆರೋಪಿಗಳು. ಕೊಲೆಯ ಪ್ರಮುಖ ಸೂತ್ರಧಾರ, 4ನೇ ಆರೋಪಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ. ರುದ್ರೇಶ್ ಕೊಲೆಗೆ ಸೈದ್ಧಾಂತಿಕ ಕಾರಣವೇ ಹೊರತು ವೈಯಕ್ತಿಕ ದ್ವೇಷವಲ್ಲ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
ರುದ್ರೇಶ್ ಕೊಲೆ ಆರೋಪಿಗಳೆಲ್ಲ SDPI(ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಎಂಬ ರಾಜಕೀಯ ಪಕ್ಷದ ಸದಸ್ಯರು.

 

► Follow us on –  Facebook / Twitter  / Google+

Facebook Comments

Sri Raghav

Admin