ಆರ್ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿಗೆ ಯತಿಸುತ್ತಿದ್ದ ನಾಲ್ವರು ಉಗ್ರರ ಹತ್ಯೆ
ನವದೆಹಲಿ,ಜೂ.5– ಜಮ್ಮು ಮತ್ತು ಕಾಶ್ಮೀರದ ಬಂಡೀಪೋರಾ ಜಿಲ್ಲೆಯ ಸಿಆರ್ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿ ನಡೆಸಲು ಪ್ರಯತ್ನಿಸಿದ ನಾಲ್ವರು ಉಗ್ರರನ್ನು ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ. ಬೆಳಗಿನ ಜಾವ 4.10ರ ಸುಮಾರಿಗೆ ಸಿಆರ್ಪಿಎಫ್ ಬಳಿ ಬಂದಿರುವ ಉಗ್ರರು ದಾಳಿ ನಡೆಸಲು ಯತ್ನ ನಡೆಸಿದ್ದಾರೆ. ಈ ವೇಳೆ ಅಲರ್ಟ ಆದ ಸೇನಾ ಪಡೆ, ಉಗ್ರರ ಯತ್ನವನ್ನು ವಿಫಲಗೊಳಿಸಿ ದಾಳಿ ನಡೆಸಲು ಮುಂದಾಗಿದ್ದ ನಾಲ್ವರು ಉಗ್ರರನ್ನು ಎನ್ಕೌಂಟರ್ ನಡೆಸಿ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಬಂಡೀಪೋರಾದ ಸುಂಬಲ್ 45 ಬೆಟಾಲಿಯನ್ ಸಿಸಿಆರ್ಪಿಎಫ್ ಕ್ಯಾಂಪ್ ಮೇಲೆ ಉಗ್ರರ ಗುಂಪೊಂದು ದಾಳಿ ನಡೆಸಲು ಮುಂದಾಗಿತ್ತು. ಕೂಡಲೇ ಕಾರ್ಯಾಚರಣೆಗಿಳಿದ ಸೇನಾ ಪಡೆ ಉಗ್ರರ ಆತ್ಮಾಹುತಿ ದಾಳಿಯನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಲ್ಲಿ ನಾಲ್ಕು ಉಗ್ರರ ಶವಗಳು ಪತ್ತೆಯಾಗಿದೆ. ಅಲ್ಲದೆ, ಎಕೆ 47 ರೈಫಲ್ಸ್ ಗಳು, 1 ಯುಬಿಜಿಎಲï ಮತ್ತು ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಈ ವೇಳೆ ಕಾರ್ಯ ಪ್ರವೃತ್ತರಾದ ಭದ್ರತೆ ಪಡೆ ಪ್ರತಿ ದಾಳಿ ಮಾಡಿದೆ. ಭಯೋತ್ಪಾದಕರು ಹಾಗೂ ಭದ್ರತೆ ಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಘಟನಾ ಸ್ಥಳದಲ್ಲಿ ನಾಲ್ಕು ಎಕೆ ರೈಫಲ್ಸ್ , ಹಲವಾರು ಗ್ರೆನೆಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ದಾಳಿಕೋರರು ಸಿಆರ್ಪಿಎಫ್ ಶಿಬಿರಕ್ಕೆ ಬೆಂಕಿಯಿಡಲು ತಮ್ಮೊಂದಿಗೆ ಪೆಟ್ರೊಲ್ ತಂದಿದ್ದರು ಎಂದು ಪೊಲಿಸರು ತಿಳಿಸಿದ್ದಾರೆ. ಉಗ್ರರ ಬಳಿ ಇದ್ದ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದ್ದು, ಸ್ಥಳದಲ್ಲಿರುವ ಇನ್ನಷ್ಟು ಉಗ್ರರನ್ನು ಸದೆಬಡಿಯಲು ಕಾರ್ಯಾಚರಣೆ ಮುಂದುವರೆಸಲಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS