ಆರ್‍ಸಿಬಿ-ಸನ್‍ರೈಸರ್ಸ್ ಪಂದ್ಯದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಭದ್ರತೆ

ಈ ಸುದ್ದಿಯನ್ನು ಶೇರ್ ಮಾಡಿ

RCB--01

ಬೆಂಗಳೂರು, ಏ.25- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಆರ್‍ಸಿಬಿ ಮತ್ತು ಸನ್‍ರೈಸರ್ಸ್ ತಂಡಗಳ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.  ಕೆಎಸ್‍ಆರ್‍ಪಿ ತುಕಡಿ, ಗರುಡ ಪಡೆ, ಹೊಯ್ಸಳ ಪೊಲೀಸ್ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಅಲ್ಲದೆ, ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.  ಪಂದ್ಯ ವೀಕ್ಷಿಸಲು ಕ್ರೀಡಾಂಗಣದ ಒಳಗೆ ಬರುವವರಿಗೆ ಬ್ಯಾಗ್, ಸಿಗರೇಟ್, ಬೆಂಕಿಪೊಟ್ಟಣ, ವಾಟರ್ ಬಾಟಲ್, ತಿನಿಸು ನಿಷೇಧಿಸಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.   ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮೂವರು ಡಿಸಿಪಿ, 11 ಎಸಿಪಿ, 38 ಇನ್‍ಸ್ಪೆಕ್ಟರ್, 86 ಸಬ್‍ಇನ್‍ಸ್ಪೆಕ್ಟರ್, 4 ಕೆಎಸ್‍ಆರ್‍ಪಿ ತುಕಡಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಅಲ್ಲದೆ, ಹೊಯ್ಸಳ, ಪಿಂಕ್ ಪೊಲೀಸ್ ವಾಹನ ಗಸ್ತನ್ನು ಹೆಚ್ಚಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin