ಆಸ್ತಿ ತೆರಿಗೆ ಪಾವತಿಸದಿದ್ದರೆ ನೀರಿನ ಸಂಪರ್ಕ ಕಡಿತಗೊಳಿಸಲಾಗುತ್ತದೆ : ಮೇಯರ್ ಭೈರಪ್ಪ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ee-sanje

ಮೈಸೂರು, ಆ.17-ಆಸ್ತಿ ತೆರಿಗೆ ಪಾವತಿಸದಿದ್ದರೆ ನೀರಿನ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಮೇಯರ್ ಭೈರಪ್ಪ ಎಚ್ಚರಿಕೆ ನೀಡಿದ್ದಾರೆ.ನಗರದ ವಲಯ ಕಚೇರಿ 1 ರಲ್ಲಿ ಇಂದು ಬೆಳಿಗ್ಗೆ ಆಸ್ತಿ ತೆರಿಗೆ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ನಗರದಲ್ಲಿ ಹಲವು ಮಂದಿ ಆಸ್ತಿ ತೆರಿಗೆಯನ್ನು ಪಾವತಿಸಿಲ್ಲ. ಇದುವರೆಗೆ ಅವರಿಗೆ ಸಲಹೆ ಕೊಟ್ಟು ನೋಟೀಸ್ ಸಹ ನೀಡಲಾಗಿದೆ. ಆದರೂ ತೆರಿಗೆ ಪಾವತಿಸಲು ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಮಾಸಾಚರಣೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ಆಸ್ತಿ ತೆರಿಗೆ ಉಳಿಸಿರುವವರು ಈ ಅವಧಿಯಲ್ಲಿ ತೆರಿಗೆ ಪಾವತಿಸಬೇಕು. ಇಲ್ಲದಿದ್ದರೆ ಮನೆ ಅಥವಾ ಕಚೇರಿ ಯಾವುದೇ ಇದ್ದರೂ ನೀರಿನ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ನಗರದಲ್ಲಿ ಪಾಲಿಕೆಗೆ ಸೇರಿದ ಹಲವು ಕಟ್ಟಡಗಳಲ್ಲಿ ಬಾಡಿಗೆದಾರರು ಅತಿ ಕಡಿಮೆ ಬಾಡಿಗೆ ನೀಡುತ್ತಿದ್ದಾರೆ. ಅದನ್ನು ಪರಿಶೀಲಿಸಿ ಇಂದಿನ ಮಾರುಕಟ್ಟೆ ದರದಂತೆ ಬಾಡಿಗೆ ನಿಗದಿಪಡಿಸಿ ಪಾವತಿಸಲು ಸೂಚಿಸಲಾಗುತ್ತದೆ ಎಂದು ತಿಳಿಸಿದರು.ಇಂದಿನಿಂದ ಆರಂಭಿಸಿರುವ ಆಸ್ತಿ ತೆರಿಗೆ ಮಾಸಾಚರಣೆಯಲ್ಲಿ 160 ಕೋಟಿ ರೂ. ತೆರಿಗೆ ಹಣ ಸಂಗ್ರಹವಾಗುವ ನಿರೀಕ್ಷೆ ಇದೆ ಎಂದು ಭೈರಪ್ಪ ತಿಳಿಸಿದರು.ಈ ವೇಳೆ ಪಾಲಿಕೆ ಅಧಿಕಾರಿಗಳು ಹಾಜರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin