ಆಸ್ತಿ ವಿವಾದ : ಇಬ್ಬರ ಬರ್ಬರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

murder

ಹಾಸನ, ಸೆ.23-ಆಸ್ತಿ ವಿವಾದದ ಹಿನ್ನೆಲೆಯಲ್ಲಿ ದಾಯಾದಿಗಳ ನಡುವೆ ಜಗಳವಾಗಿ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಿವಕುಮಾರ್ (33) ಮತ್ತು ಸಚಿನ್ (25) ಕೊಲೆಯಾದ ದುರ್ದೈವಿಗಳು.ತಾಲೂಕಿನ ಕಬ್ಬೂರು ಗ್ರಾಮದಲ್ಲಿ ದಾಯಾದಿಗಳ ನಡುವೆ ಆಸ್ತಿ ವಿಚಾರವಾಗಿ ಜಗಳ ನಡೆದಿದ್ದು, ಈ ವೇಳೆ ಕೈ ಕೈ ಮಿಲಾಯಿಸಿಕೊಂಡು ಕೆಳಗೆ ಬಿದ್ದ ಶಿವಕುಮಾರ್, ಸಚಿನ್ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin