ಆ್ಯಸಿಡ್ ದಾಳಿ ಸಂತ್ರಸ್ತರಿಗೆ ನೀಡುವ ಪರಿಹಾರ 4 ಲಕ್ಷ ರೂ.ಗಳಿಗೆ ಏರಿಸಿದ ಕೇಂದ್ರ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

Acide-Attack--01

ನವದೆಹಲಿ, ಫೆ.4- ಆ್ಯಸಿಡ್ ದಾಳಿ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ 1 ಲಕ್ಷ ರೂ.ಗಳ ಹೆಚ್ಚುವರಿ ಪರಿಹಾರವನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ(ಪಿಎಂಎನ್‍ಆರ್‍ಎಫ್) ನೀಡುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಸಮ್ಮತಿಸಿದ್ದಾರೆ. ಇದರೊಂದಿಗೆ ಆ್ಯಸಿಡ್‍ಗೆ ಒಳಗಾದವರಿಗೆ ಲಭಿಸುವ ಪರಿಹಾರ 4 ಲಕ್ಷ ರೂ.ಗಳಿಗೆ ಏರಿದಂತಾಗಿದೆ.  ಗೃಹ ಸಚಿವಾಲಯದ ಕೇಂದ್ರ ಸಂತ್ರಸ್ತರ ಪರಿಹಾರ ನೀಡಿ ನಿಧಿ ಯೋಜನೆಯಡಿ ರಾಜ್ಯ ಸರ್ಕಾರಗಳು ಆ್ಯಸಿಡ್ ದಾಳಿ ಸಂತ್ರಸ್ತರಿಗೆ 3 ಲಕ್ಷ ರೂ.ಗಳ ಪರಿಹಾರ ನೀಡಲಾಗುತ್ತಿದೆ. ಈಗ 3 ಲಕ್ಷ ರೂ.ಗಳಲ್ಲದೇ ಪಿಎಂಎನ್‍ಅರ್‍ಎಫ್ ಮೂಲಕ ಹೆಚ್ಚುವರಿಯಾಗಿ 1 ಲಕ್ಷ ರೂ.ಗಳನ್ನು ನೀಡಬೇಕಾಗುತ್ತದೆ.

ಆ್ಯಸಿಡ್ ದಾಳಿ ಪ್ರಕರಣಗಳನ್ನು ಕೇಂದ್ರ ಸರ್ಕಾರ ಆದ್ಯತೆ ಮೇಲೆ ಪರಿಗಣಿಸುತ್ತದೆ. ಈ ಸಂಬಂಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕೆಲವು ವಿಧಿಗಳಿಗೂ ತಿದ್ದುಪಡಿ ಮಾಡಲಾಗಿದೆ.
ಹೆಚ್ಚುವರಿ ಪರಿಹಾರ ನೀಡಲು ಮಾರ್ಗಸೂಚಿಗಳನ್ನು ಅನುಸರಿಸ ಬೇಕಾಗುತ್ತದೆ. ಈ ಸಂಬಂಧ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಬೇಕು. ವರದಿ ಬಂದ ಐದು ದಿನಗಳ ಒಳಗಾಗಿ ಸಂತ್ರಸ್ತರ ಖಾತೆಗೆ 1 ಲಕ್ಷ ರೂ.ಗಳನ್ನು ಜಮಾ ಮಾಡಲಾಗುತ್ತದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin